Shivamogga Zilla Panchayat Recruitment 2023: ಶಿವಮೊಗ್ಗ ಜಿಲ್ಲಾ ಪಂಚಾಯತ್(Shivamogga Zilla Panchayat )ನಲ್ಲಿ ಖಾಲಿ ಇರುವ 1 ಅಕೌಂಟ್ಸ್ ಮ್ಯಾನೇಜರ್(Accounts Manager) ಹುದ್ದೆಗೆ ಅರ್ಜಿ ಹಾಕಲು ಡಿ. 23 ಅಂದರೆ ನಾಳೆಯೇ ಕೊನೆಯ ದಿನವಾಗಿದೆ. ನರೇಗಾ ಯೋಜನೆಯಡಿ ಈ ಹುದ್ದೆಯ ನೇಮಕಾತಿ ನಡೆಯುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಶಿವಮೊಗ್ಗದಲ್ಲಿ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು(Local Candidates) ಈ ಅವಕಾಶವನ್ನು ಸದುಯೋಗಪಡಿಸಿಕೊಳ್ಳಬಹುದು. ಆಸಕ್ತರು ಡಿಸೆಂಬರ್ 23, 2022 ಅಂದರೆ ನಾಳೆಯೊಳಗೆ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಶಿವಮೊಗ್ಗ ಜಿಲ್ಲಾ ಪಂಚಾಯತ್ |
ಹುದ್ದೆ | ಅಕೌಂಟ್ಸ್ ಮ್ಯಾನೇಜರ್ |
ಒಟ್ಟು ಹುದ್ದೆ | 1 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಶಿವಮೊಗ್ಗ |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/12/2022
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಶೈಕ್ಷಣಿಕ ಅರ್ಹತೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಎಂಬಿಎ ಫೈನಾನ್ಸ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Government Job: ಬಿ.ಎಡ್ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರಿ- 50 ವರ್ಷದವರೂ ಅಪ್ಲೈ ಮಾಡಬಹುದು
ಉದ್ಯೋಗದ ಸ್ಥಳ:
ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಶಿವಮೊಗ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವಯೋಮಿತಿ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವೇತನ:
ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: Post Office Jobs: 10ನೇ ತರಗತಿ ಪಾಸಾಗಿದ್ರೆ ಪೋಸ್ಟ್ ಆಫೀಸ್ನಲ್ಲಿದೆ ಬಂಪರ್ ಉದ್ಯೋಗ-ಲಿಖಿತ ಪರೀಕ್ಷೆ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ