ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಒಂದು ಯಂಗ್ ಪ್ರೊಫೆಶನಲ್-I ಹುದ್ದೆ ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಡಿಸೆಂಬರ್ 9, 2022 ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಧಾರವಾಡ ಕೃಷಿ ವಿಶ್ವವಿದ್ಯಾಲಯ |
ಹುದ್ದೆ | ಯಂಗ್ ಪ್ರೊಫೆಶನಲ್-I |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಬಿಎಸ್ಸಿ |
ವೇತನ | ಮಾಸಿಕ ₹ 25,000 |
ಉದ್ಯೋಗದ ಸ್ಥಳ | ಧಾರವಾಡ |
ಇದನ್ನೂ ಓದಿ: SSC Recruitment 2022: ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾದವರು Apply ಮಾಡಿ
ವಿದ್ಯಾರ್ಹತೆ ಏನಿರಬೇಕು?
ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಸ್ಸಿ(ಅಗ್ರಿ) ಪೂರ್ಣಗೊಳಿಸಿರಬೇಕು.
ಸಂಬಳ ಎಷ್ಟು ಕೊಡಲಾಗುತ್ತೆ?
ಯಂಗ್ ಪ್ರೊಫೆಶನಲ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 25 ಸಾವಿರ ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Jobs: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ರೋಡ್ ಸೇಫ್ಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಂದರ್ಶನ ನಡೆಯುವ ಸ್ಥಳ:
ವಿಸ್ತರಣಾ ನಿರ್ದೇಶನಾಲಯ,
ಕೃಷಿ ವಿಶ್ವವಿದ್ಯಾಲಯ,
ಧಾರವಾಡ,
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ