UAS Dharwad Recruitment 2023: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಫೀಲ್ಡ್ ಅಸಿಸ್ಟೆಂಟ್(Field Assistant) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರದಲ್ಲಿ(Vijayapura) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಜನವರಿ 6, 2023 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆ | ಫೀಲ್ಡ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 1 |
ವೇತನ | ತಿಂಗಳಿಗೆ 10,000 |
ಉದ್ಯೋಗದ ಸ್ಥಳ | ವಿಜಯಪುರ |
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಪ್ರಾಜೆಕ್ಟ್ನಲ್ಲಿ ಕನಿಷ್ಠ 2-3 ವರ್ಷ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
ಇದನ್ನೂ ಓದಿ:Government Job: ರಾಜ್ಯ ಸರ್ಕಾರದ ಈ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು ನಿಗದಿಪಡಿಸಿಲ್ಲ. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಫೀಲ್ಡ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 10,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಫೀಲ್ಡ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ವಿಜಯಪುರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಸಂಶೋಧನಾ ಸಹಾಯಕ ನಿರ್ದೇಶಕರ ಕಛೇರಿ (HQ)
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ
ವಿಜಯಪುರ
ಕರ್ನಾಟಕ
ಇದನ್ನೂ ಓದಿ: UAS Raichur Recruitment 2023: ರಾಯಚೂರಿನಲ್ಲಿದೆ 54,000 ಸಂಬಳದ ಉದ್ಯೋಗ-ಜ.11ಕ್ಕೆ ಸಂದರ್ಶನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 22/12/2022
ಸಂದರ್ಶನ ನಡೆಯುವ ದಿನ: 06/01/2023 ಬೆಳಗ್ಗೆ 10 ಗಂಟೆಗೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ