UAS Raichur Recruitment 2023: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು(University of Agricultural Sciences Raichur) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್ ಅಸೋಸಿಯೇಟ್(Research Associate) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಜನವರಿ 11, 2023 ರಂದು ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಇಂಟರ್ವ್ಯೂನಲ್ಲಿ(Interview) ಭಾಗಿಯಾಗಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು |
ಹುದ್ದೆ | ರಿಸರ್ಚ್ ಅಸೋಸಿಯೇಟ್ |
ಒಟ್ಟು ಹುದ್ದೆ | 1 |
ವೇತನ | ತಿಂಗಳಿಗೆ 54,000 |
ಉದ್ಯೋಗದ ಸ್ಥಳ | ರಾಯಚೂರು |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂಬುದನ್ನು ನಿಗದಿಪಡಿಸಿಲ್ಲ. ಮೀಸಲಾತಿಗೆ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Government Job: ರಾಜ್ಯ ಸರ್ಕಾರದ ಈ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವೇತನ:
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 54,000 ರೂ. ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಕೀಟನಾಶಕ ಶೇಷ ಮತ್ತು ಆಹಾರ ಗುಣಮಟ್ಟ ವಿಶ್ಲೇಷಣೆ ಪ್ರಯೋಗಾಲಯ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ
ರಾಯಚೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Railway Jobs: 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸಾದವರು ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನ: 26/12/2022
ಸಂದರ್ಶನ ನಡೆಯುವ ದಿನ: 11/01/2023 ಬೆಳಗ್ಗೆ 11 ಗಂಟೆಗೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ