• ಹೋಂ
 • »
 • ನ್ಯೂಸ್
 • »
 • Jobs
 • »
 • University Jobs: ಬೆಳಗಾವಿಯ ರಾಣಿ ಚೆನ್ನಮ್ಮ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

University Jobs: ಬೆಳಗಾವಿಯ ರಾಣಿ ಚೆನ್ನಮ್ಮ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಣಿ ಚೆನ್ನಮ್ಮ ಯೂನಿವರ್ಸಿಟಿ

ರಾಣಿ ಚೆನ್ನಮ್ಮ ಯೂನಿವರ್ಸಿಟಿ

ಅರ್ಜಿ ಸಲ್ಲಿಸಲು ಮಾರ್ಚ್ 2, 2023 ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ / ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ (Belagavi) ಪೋಸ್ಟಿಂಗ್ ನೀಡಲಾಗುತ್ತದೆ.

 • News18 Kannada
 • 2-MIN READ
 • Last Updated :
 • Belgaum, India
 • Share this:

RCUB Recruitment 2023: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ(Rani Chennamma University, Belagavi) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದ ಅಡಿಯಲ್ಲಿ ಲಭ್ಯವಿರುವ ವಿವಿಧ ವೃಂದದ ಬೋಧಕೇತರ (Non-Teaching) ಹುದ್ದೆಗಳ ನೇರ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 2, 2023 ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್ / ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ (Belagavi) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯಯದ ವೆಬ್​​ಸೈಟ್​​​​ನಲ್ಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ಸೇವಾ ಅನುಭವ ಇತ್ಯಾದಿ ವಿವರಗಳನ್ನು ನೋಡಬಹುದು.


ವಿಶ್ವವಿದ್ಯಾಲಯದ ಅಧಿಕೃತ ವೆಬ್​ಸೈಟ್www.rcub.ac.in


ಅಭ್ಯರ್ಥಿಗಳು ಈ ವೆಬ್​ಸೈಟ್​​ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್​ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಲ್ಲಿಸಿ.


ಇದನ್ನೂ ಓದಿ: SIDBI ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಬೆಂಗಳೂರಿನಲ್ಲಿ ಉದ್ಯೋಗ


ಅರ್ಜಿ ಶುಲ್ಕ:
SC/ST/ ಪ್ರವರ್ಗ-1- 500ರೂ.ಗಳು
ಇತರೆ ಸಾಮಾನ್ಯ ಅಭ್ಯರ್ಥಿಗಳು- 1000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​​


ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿಯನ್ನು ಹಣಕಾಸು ಅಧಿಕಾರಿಗಳು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ- ಇವರ ಹೆಸರಿನಲ್ಲಿ ತೆಗೆಯಬೇಕು.


ಇದನ್ನೂ ಓದಿ: Karnataka Jobs: ಆರೋಗ್ಯ ಇಲಾಖೆಯಲ್ಲಿ 23 ಹುದ್ದೆಗಳು ಖಾಲಿ- ಇವತ್ತೇ ಅರ್ಜಿ ಹಾಕಿ


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಶುಲ್ಕ ಕಟ್ಟಿದ ಡಿ.ಡಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಕುಲಸಚಿವರು
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ
ಭೂತರಾಮನಹಟ್ಟಿ
ಬೆಳಗಾವಿ -591156
ಅರ್ಜಿಯು ಮಾರ್ಚ್​ 2, 2023 ಸಂಜೆ 5 ಗಂಟೆಯೊಳಗೆ ಕುಲಸಚಿವರ ಕಚೇರಿಗೆ ತಲುಪಬೇಕು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 10, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 2, 2023

Published by:Latha CG
First published: