• ಹೋಂ
  • »
  • ನ್ಯೂಸ್
  • »
  • Jobs
  • »
  • Job Alert: ಬೆಂಗಳೂರಿನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 81,000 ಸಂಬಳ

Job Alert: ಬೆಂಗಳೂರಿನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 81,000 ಸಂಬಳ

VITM

VITM

ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮುಖಾಂತರ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

VITM Bangalore Recruitment 2023: ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಾಲಜಿಕಲ್ ಮ್ಯೂಸಿಯಂ(Visvesvaraya Industrial & Technological Museum) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ಸ್ಟೆನೋಗ್ರಾಫರ್(Junior Stenographer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಫೆಬ್ರವರಿ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮುಖಾಂತರ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಾಲಜಿಕಲ್ ಮ್ಯೂಸಿಯಂ
ಹುದ್ದೆಜೂನಿಯರ್ ಸ್ಟೆನೋಗ್ರಾಫರ್
ಒಟ್ಟು ಹುದ್ದೆ1
ವಿದ್ಯಾರ್ಹತೆಪಿಯುಸಿ
ವೇತನಮಾಸಿಕ ₹ 25,500-81,100
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 28, 2023

ವಿದ್ಯಾರ್ಹತೆ:
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಾಲಜಿಕಲ್ ಮ್ಯೂಸಿಯಂ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೆಕೆಂಡ್ ಪಿಯುಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Belagavi: ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಮಾಸಿಕ ವೇತನ ₹ 2.17 ಲಕ್ಷ


ವಯೋಮಿತಿ:
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಾಲಜಿಕಲ್ ಮ್ಯೂಸಿಯಂ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 28, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 25,500-81,100


ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು- 750 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್​


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಶಾರ್ಟ್​​ಹ್ಯಾಂಡ್ ಪ್ರೊಫೆಸಿಯೆನ್ಸಿ ಟೆಸ್ಟ್​




ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ನಿರ್ದೇಶಕರು
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ & ಟೆಕ್ನಾಲಜಿಕಲ್ ಮ್ಯೂಸಿಯಂ
ಕಸ್ತೂರಬಾ ರಸ್ತೆ
ಬೆಂಗಳೂರು- 560001


ಇದನ್ನೂ ಓದಿ; KMF ಶಿಮುಲ್​​ನಲ್ಲಿ 194 ಹುದ್ದೆಗಳ ನೇರ ನೇಮಕಾತಿ- ಆಸಕ್ತರು ಇಲ್ಲಿ ಅರ್ಜಿ ಹಾಕಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023

Published by:Latha CG
First published: