Yadgir District Court Recruitment 2023: ಯಾದಗಿರಿ ಜಿಲ್ಲಾ ಕೋರ್ಟ್ (Yadgir District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ (Yadgir) ಪೋಸ್ಟಿಂಗ್ ನೀಡಲಾಗುತ್ತದೆ. ಕೆಲಸ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಯಾದಗಿರಿ ಜಿಲ್ಲಾ ಕೋರ್ಟ್ |
ಹುದ್ದೆ | ಸ್ಟೆನೋಗ್ರಾಫರ್ ಗ್ರೇಡ್-III |
ಒಟ್ಟು ಹುದ್ದೆ | 6 |
ವಿದ್ಯಾರ್ಹತೆ | ಪಿಯುಸಿ, ಡಿಪ್ಲೊಮಾ |
ವೇತನ | ಮಾಸಿಕ ₹27,650- 52,650 |
ಉದ್ಯೋಗದ ಸ್ಥಳ | ಯಾದಗಿರಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 29, 2023 |
ಇದನ್ನೂ ಓದಿ: KSP Recruitment 2023: ಕರ್ನಾಟಕ ಪೊಲೀಸ್ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ವಯೋಮಿತಿ:
ಯಾದಗಿರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ-2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 200 ರೂ.
SC/ ST/ PWD ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಮಾಸಿಕ ₹27,650- 52,650
ಇದನ್ನೂ ಓದಿ: KFD Recruitment 2023: ಫಾರೆಸ್ಟ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಸಿಗಬೇಕಾ? ನಾಳೆಯೊಳಗೆ ಅಪ್ಲೈ ಮಾಡಿ
ಉದ್ಯೋಗದ ಸ್ಥಳ:
ಯಾದಗಿರಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 29, 2023 (ನಾಳೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಮೇ 3, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ