Yadgir Zilla Panchayat Recruitment 2023: ಯಾದಗಿರಿ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ 15 ಟೆಕ್ನಿಕಲ್ ಅಸಿಸ್ಟೆಂಟ್(Technical Assistant), ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ (Administrative Assistant) ಹುದ್ದೆಗಳಿಗೆ ಅರ್ಜಿ ಹಾಕಲು ಇವತ್ತೇ ಕೊನೆಯ ದಿನವಾಗಿದೆ(Last Date). ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಡಿಸೆಂಬರ್ 29 ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿತ್ತು. ಇವತ್ತು ಸಂಜೆ 5 ಗಂಟೆಯೊಳಗೆ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ ಮೆರಿಟ್ ಲಿಸ್ಟ್ನ್ನು ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-409651 ಗೆ ಕರೆ ಮಾಡಿ.
ಅರ್ಜಿ ಸಲ್ಲಿಸುವ ಲಿಂಕ್ಗಳು ಇಲ್ಲಿವೆ:
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗಾಗಿ ಯಾದಗಿರಿ ಜಿಲ್ಲಾ ಪಂಚಾಯತ್ನ ಅಧಿಕೃತ ವೆಬ್ಸೈಟ್ zpyadgiri.karnataka.gov.in ಗೆ ಭೇಟಿ ನೀಡಿ.
ಸಂಸ್ಥೆ | ಯಾದಗಿರಿ ಜಿಲ್ಲಾ ಪಂಚಾಯತ್ |
ಹುದ್ದೆ | ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 15 |
ಅರ್ಜಿ ಸಲ್ಲಿಸಲು ಕೊನೆ ದಿನ | ಜನವರಿ 7, 2023(ಇಂದು) |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಯಾದಗಿರಿ |
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟಿ)- 4
ಟೆಕ್ನಿಕಲ್ ಅಸಿಸ್ಟೆಂಟ್(ಹಾರ್ಟಿಕಲ್ಚರ್)-4
ಟೆಕ್ನಿಕಲ್ ಅಸಿಸ್ಟೆಂಟ್(ಸಿರಿಕಲ್ಚರ್)-1
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-6
ಇದನ್ನೂ ಓದಿ: JOBS: ಹುಬ್ಬಳ್ಳಿಯಲ್ಲಿ ಸರ್ಕಾರಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ
ವಿದ್ಯಾರ್ಹತೆ:
ಟೆಕ್ನಿಕಲ್ ಅಸಿಸ್ಟೆಂಟ್ (ಫಾರೆಸ್ಟಿ)- ಬಿಎಸ್ಸಿ, ಎಂಎಸ್ಸಿ(ಫಾರೆಸ್ಟ್ರಿ)
ಟೆಕ್ನಿಕಲ್ ಅಸಿಸ್ಟೆಂಟ್(ಹಾರ್ಟಿಕಲ್ಚರ್)-ಬಿಎಸ್ಸಿ, ಎಂಎಸ್ಸಿ (ಹಾರ್ಟಿಕಲ್ಚರ್)
ಟೆಕ್ನಿಕಲ್ ಅಸಿಸ್ಟೆಂಟ್(ಸಿರಿಕಲ್ಚರ್)-ಬಿಎಸ್ಸಿ, ಎಂಎಸ್ಸಿ (ಸಿರಿಕಲ್ಚರ್)
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್-ಬಿ.ಕಾಂ
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ:
ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ