Anna University Recruitment 2023: ಅಣ್ಣಾ ವಿಶ್ವವಿದ್ಯಾಲಯವು(Anna University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ಟೀಚಿಂಗ್ ಫೆಲೋ(Teaching Fellow) ಹುದ್ದೆಗಳು ಖಾಲಿ ಇದ್ದು, ಎಂಎ, ಪಿಎಚ್.ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ. ಡಿಸೆಂಬರ್ 12, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಅಣ್ಣಾ ವಿಶ್ವವಿದ್ಯಾಲಯ |
ಹುದ್ದೆ | ಟೀಚಿಂಗ್ ಫೆಲೋ |
ಒಟ್ಟು ಹುದ್ದೆ | 23 |
ವಿದ್ಯಾರ್ಹತೆ | ಎಂಎ, ಪಿಎಚ್.ಡಿ |
ಉದ್ಯೋಗದ ಸ್ಥಳ | ಚೆನ್ನೈ |
ವೇತನ | ಮಾಸಿಕ 25,000 |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ irtamildvt@annauniv.edu ಗೆ ಕಳುಹಿಸಬೇಕು.
ವಿದ್ಯಾರ್ಹತೆ:
ಅಣ್ಣಾ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ತಮಿಳು ಭಾಷೆಯಲ್ಲಿ ಎಂಎ, ಪಿಎಚ್.ಡಿ / NET/SLET ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: CPCRI Recruitment 2023: ದಕ್ಷಿಣ ಕನ್ನಡದಲ್ಲಿ ಕೆಲಸ ಖಾಲಿ ಇದೆ- ಡಿ.29ಕ್ಕೆ ಸಂದರ್ಶನ
ಉದ್ಯೋಗದ ಸ್ಥಳ:
ಅಣ್ಣಾ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ಮೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಅಣ್ಣಾ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ತಿಂಗಳಿಗೆ 25,000 ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ