ಗುಲಬರ್ಗಾ ವಿಶ್ವವಿದ್ಯಾಲಯವು(Gulbarga University) ಯುಜಿಸಿ(UGC) ನಿಯಮಾನುಸಾರ 53 ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಲಬುರ್ಗಿಯಲ್ಲಿ(Kalburagi) ವೃತ್ತಿ ಮಾಡಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ನವೆಂಬರ್ 30ರೊಳಗೆ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಗುಲಬರ್ಗಾ ವಿಶ್ವವಿದ್ಯಾಲಯ |
ಹುದ್ದೆ | ಅತಿಥಿ ಉಪನ್ಯಾಸಕ |
ಒಟ್ಟು ಹುದ್ದೆ | 53 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಕಲಬುರಗಿ |
ಅತಿಥಿ ಉಪನ್ಯಾಸಕರನ್ನು ಯುಜಿಸಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ಅತಿಥಿ ಉಪನ್ಯಾಸಕ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿವೆ.
ಆಯ್ಕೆಯಾದ ಅಭ್ಯರ್ಥಿಗಳ ಸೇವೆಯು ತೃಪ್ತಿಕರವಾಗಿರದಿದ್ದರೆ ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ತೆಗೆದು ಹಾಕಬಹುದು.
ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧೀನಕ್ಕೊಳಪಟ್ಟಿರುವ ಯಾವುದೇ ಸ್ನಾತಕೋತ್ತರ ಕೇಂದ್ರಗಳಲ್ಲಿ ಸೇವೆ ಸಲ್ಲಿಸಲು ಸಿದ್ಧವಿರಬೇಕು.
ಇದನ್ನೂ ಓದಿ: Central Government Job: ತಿಂಗಳಿಗೆ ₹ 25,000 ಸಂಬಳ- 10th, ಪಿಯುಸಿ ಪಾಸಾಗಿದ್ರೆ ಕೇಂದ್ರ ಸರ್ಕಾರದ ಉದ್ಯೋಗ
ಅರ್ಜಿ ಶುಲ್ಕ ಎಷ್ಟು?
ಎಸ್ಸಿ/ಎಸ್ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ.
ಶುಲ್ಕ ಪಾವತಿಸುವ ಬಗೆ- SBI ಕಲೆಕ್ಟ್
ಅರ್ಜಿ ಸಲ್ಲಿಸುವುದು ಹೇಗೆ?
ಗುಲಬರ್ಗಾ ವಿಶ್ವವಿದ್ಯಾಲಯ ಅಧಿಕೃತ ವೆಬ್ಸೈಟ್ www.gug.ac.in ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಶೈಕ್ಷಣಿಕ ಅರ್ಹತೆ, ಅನುಭವದ ವಿವರ, ಜಾತಿ, ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರತಿಗಳನ್ನು ಕಡ್ಡಾಯವಾಗಿ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 30ರೊಳಗೆ ಕಳುಹಿಸಬೇಕು.
ವಿಭಾಗೀಯ ಮುಖ್ಯಸ್ಥರ ಕಚೇರಿ
ವಿಶ್ವವಿದ್ಯಾಲಯ ಮುಖ್ಯ ಆವರಣ
ಗುಲಬರ್ಗಾ ವಿಶ್ವವಿದ್ಯಾಲಯ
ಜ್ಞಾನ ಗಂಗಾ
ಕಲಬುರಗಿ-585106
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 30/11/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ