• Home
  • »
  • News
  • »
  • jobs
  • »
  • ಬೆಂಗಳೂರು ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- 36,000 ಸಂಬಳ

ಬೆಂಗಳೂರು ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- 36,000 ಸಂಬಳ

ಬೆಂಗಳೂರು ವಿಶ್ವವಿದ್ಯಾಲಯ

ಬೆಂಗಳೂರು ವಿಶ್ವವಿದ್ಯಾಲಯ

ಅಭ್ಯರ್ಥಿಗಳು ಜನವರಿ 20, 2023ಕ್ಕೆ ಮುನ್ನ ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಬೇಕು. ತಡಮಾಡದೇ ಈ ಕೂಡಲೇ Apply ಮಾಡಿ.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

Bangalore University Recruitment 2023: ಬೆಂಗಳೂರು ವಿಶ್ವವಿದ್ಯಾನಿಲಯ(Bangalore University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ(Bengaluru) ವೃತ್ತಿ ಜೀವನ ನಡೆಸಬೇಕು ಎಂದುಕೊಂಡಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ಜನವರಿ 20, 2023ಕ್ಕೆ ಮುನ್ನ ಆಫ್​ಲೈನ್(Offline)​ ಮೂಲಕ ಅರ್ಜಿ ಹಾಕಬೇಕು. ತಡಮಾಡದೇ ಈ ಕೂಡಲೇ Apply ಮಾಡಿ.


ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ bangaloreuniversity.ac.in ಗೆ ಭೇಟಿ ನೀಡಿ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಬೆಂಗಳೂರು ಯೂನಿವರ್ಸಿಟಿ
ಹುದ್ದೆಅಸಿಸ್ಟೆಂಟ್ ಲೈಬ್ರರಿಯನ್
ಒಟ್ಟು ಹುದ್ದೆ7
ವೇತನಮಾಸಿಕ 36,000 ರೂ.
ಉದ್ಯೋಗದ ಸ್ಥಳಬೆಂಗಳೂರು

ಅರ್ಹತಾ ಮಾನದಂಡಗಳೇನು?


ಶೈಕ್ಷಣಿಕ ಅರ್ಹತೆ:


ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮಾಸ್ಟರ್ ಆಫ್​ ಲೈಬ್ರರಿ ಸೈನ್ಸ್​(M.LISc), ಎಂ.ಫಿಲ್, ಪಿಎಚ್​.ಡಿ ಪಡೆದಿರಬೇಕು.


ಇದನ್ನೂ ಓದಿ: KPSC Recruitment 2023: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KPSC, ಜನವರಿ 11ರೊಳಗೆ ಅರ್ಜಿ ಸಲ್ಲಿಸಿ


ವಯೋಮಿತಿ:


ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾವಳಿಗಳ ಪ್ರಕಾರ ಇರಬೇಕು.


ವಯೋಮಿತಿ ಸಡಿಲಿಕೆ:


ಬೆಂಗಳೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ ಪ್ರಕಾರ, ಅಸಿಸ್ಟೆಂಟ್ ಲೈಬ್ರರಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:


ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 20, 2023 ಕ್ಕೆ ಮುನ್ನ ಕಳುಹಿಸಬೇಕು.


ಸಹಾಯಕ ರಿಜಿಸ್ಟ್ರಾರ್
ಸ್ಥಾಪನೆ ವಿಭಾಗ-I
ಆಡಳಿತಾತ್ಮಕ ಬ್ಲಾಕ್
ಬೆಂಗಳೂರು ವಿಶ್ವವಿದ್ಯಾಲಯ
ಜ್ಞಾನ ಭಾರತಿ ಕ್ಯಾಂಪಸ್
ಬೆಂಗಳೂರು-560056

ಅರ್ಜಿ ಇಲ್ಲಿ ಲಭ್ಯವಿದೆ:


07-Assistant-Librarian-Posts-Advt-Details-Application-Form-Bangalore-University


ಪ್ರಮುಖ ದಿನಾಂಕಗಳು:


ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2023
ಅರ್ಜಿ ಸಲ್ಲಿಸಲು ಕೊನೆ ದಿನ: 20/01/2023


ಇದನ್ನೂ ಓದಿ: ಇನ್​​ಸ್ಟೆಮ್​ನಲ್ಲಿ BE/ B.Tech ಆದವರಿಗೆ ಉದ್ಯೋಗ- ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಿ


ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, 1 ವರ್ಷದ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ.

Published by:Latha CG
First published: