BEEI Recruitment 2023: ಬಿಇಎಲ್ ಎಜುಕೇಷನಲ್ ಇನ್ಸ್ಟಿಟ್ಯೂಶನ್(BEL Educational Institution) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪ್ರಿನ್ಸಿಪಾಲ್(Principal) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಪೋಸ್ಟ್/ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬಿಇಎಲ್ ಎಜುಕೇಷನಲ್ ಇನ್ಸ್ಟಿಟ್ಯೂಶನ್ |
ಹುದ್ದೆ | ಪ್ರಿನ್ಸಿಪಾಲ್ |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ, ಬಿ.ಎಡ್ |
ವೇತನ | ಮಾಸಿಕ ₹ 56,800-99,600 |
ಉದ್ಯೋಗದ ಸ್ಥಳ | ಬೆಂಗಳೂರು |
ವಯೋಮಿತಿ | 45-55 ವರ್ಷ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 15, 2023 |
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಕನಿಷ್ಠ 45 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Job Alert: ಡಬಲ್ ಡಿಗ್ರಿ ಮಾಡಿದವರಿಗೆ ಇಲ್ಲಿದೆ ಬಂಪರ್ ಉದ್ಯೋಗ- ತಿಂಗಳಿಗೆ 1 ಲಕ್ಷ ಸಂಬಳ
ವೇತನ:
ಪ್ರಿನ್ಸಿಪಾಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 56,800-99,600 ರೂ. ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಫೆಬ್ರವರಿ 15 ರೊಳಗೆ ಕಳುಹಿಸಬೇಕು.
ಕಾರ್ಯದರ್ಶಿ
BERI BEL ಹೈಸ್ಕೂಲ್ ಕಟ್ಟಡ
ಜಾಲಹಳ್ಳಿ P.O
ಬೆಂಗಳೂರು- 560013
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ