Department of Collegiate Education Recruitment 2023: ಕಾಲೇಜು ಶಿಕ್ಷಣ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 778 ಪಿಯು ಉಪನ್ಯಾಸಕ(PU Lecturers) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ(Direct Recruitment) ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್(Education Minister BC Nagesh) ಅವರು ತಿಳಿಸಿದ್ದಾರೆ. ಶೀಘ್ರದಲ್ಲೇ ಅಧಿಸೂಚನೆ(Notification) ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಒಟ್ಟು 10 ವಿಷಗಳ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ.
ಕನ್ನಡ- 100
ಇಂಗ್ಲಿಷ್- 120
ಹಿಸ್ಟರಿ- 120
ಎಕನಾಮಿಕ್ಸ್-180
ಜಿಯೋಗ್ರಫಿ-20
ಕಾಮರ್ಸ್-80
ಸೋಶಿಯಾಲಜಿ-75
ಪೊಲಿಟಿಕಲ್ ಸೈನ್ಸ್-75
ಸೈಕಾಲಜಿ-2
ಕಂಪ್ಯೂಟರ್ ಸೈನ್ಸ್- 6
ಒಟ್ಟು 778 ಹುದ್ದೆಗಳು
ಇದನ್ನೂ ಓದಿ: ಬೆಂಗಳೂರಿನ ಈ ಸಂಸ್ಥೆಯಲ್ಲಿ 26 ಹುದ್ದೆಗಳು ಖಾಲಿ: PUC ಆದವರೂ ಅರ್ಜಿ ಹಾಕಿ, ತಿಂಗಳಿಗೆ 72 ಸಾವಿರ ಸಂಬಳ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ dce.kar.nic.in ಗೆ ಭೇಟಿ ನೀಡಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ