ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೆಟ್ ಪ್ರೊಫೆಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ (Apply)ಹಾಕಬಹುದು. ಬೆಂಗಳೂರಿನಲ್ಲಿ (Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದೇ ಜನವರಿ 25, 2023 ರಂದು ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ |
ಹುದ್ದೆ | ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಅಸೋಸಿಯೆಟ್ ಪ್ರೊಫೆಸರ್ |
ಒಟ್ಟು ಹುದ್ದೆ | 13 |
ವೇತನ | 2 ಲಕ್ಷದವರೆಗೆ |
ಉದ್ಯೋಗದ ಸ್ಥಳ | ಬೆಂಗಳೂರು |
ಸಂದರ್ಶನ ನಡೆಯುವ ದಿನ | ಜನವರಿ 25, 2023 |
ವಯೋಮಿತಿ | ಗರಿಷ್ಠ 67 ವರ್ಷ |
ಇದನ್ನೂ ಓದಿ: ಜವಹರ್ ನವೋದಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳ ನೇಮಕಾತಿ- ಜ. 16ಕ್ಕೆ ಯಾದಗಿರಿಯಲ್ಲಿ ಸಂದರ್ಶನ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 67 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಪ್ರೊಫೆಸರ್- ಮಾಸಿಕ ₹ 2,22,543
ಅಸೋಸಿಯೇಟ್ ಪ್ರೊಫೆಸರ್- ಮಾಸಿಕ ₹ 1,47,986
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 1,27,141
ಸಂದರ್ಶನ ನಡೆಯುವ ಸ್ಥಳ:
ಹೊಸ ಶೈಕ್ಷಣಿಕ ಬ್ಲಾಕ್
ESIC MC & PGIMSR
ರಾಜಾಜಿನಗರ
ಬೆಂಗಳೂರು
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/01/2023
ಸಂದರ್ಶನ ನಡೆಯುವ ದಿನಾಂಕ: ಜನವರಿ 25, 2023
ಯಾವ ಹುದ್ದೆಗೆ ಯಾವಾಗ ಸಂದರ್ಶನ?
ಪ್ರೊಫೆಸರ್- ಜನವರಿ 24, 2023
ಅಸೋಸಿಯೇಟ್ ಪ್ರೊಫೆಸರ್- ಜನವರಿ 24, 2023
ಅಸಿಸ್ಟೆಂಟ್ ಪ್ರೊಫೆಸರ್- ಜನವರಿ 25, 2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23125571 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ