ISEC Recruitment 2023: ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್(Institute for Social & Economic Change) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಅಸಿಸ್ಟೆಂಟ್ ಪ್ರೊಫೆಸರ್(Assistant Professor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಜೂನ್ 12, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ಪೋಸ್ಟ್ ಮುಖಾಂತರ ಅರ್ಜಿ ಹಾಕಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ |
ಹುದ್ದೆ | ಅಸಿಸ್ಟೆಂಟ್ ಪ್ರೊಫೆಸರ್ |
ಒಟ್ಟು ಹುದ್ದೆ | 4 |
ವೇತನ | ಮಾಸಿಕ ₹ 15,600-39,100 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 12, 2023 |
ಇದನ್ನೂ ಓದಿ: JOBS: ತಿಂಗಳಿಗೆ 50 ಸಾವಿರ ಸಂಬಳ- ಬಿ.ಎಸ್ಸಿ ಓದಿದವರು ಈಗಲೇ ಅರ್ಜಿ ಹಾಕಿ
ವೇತನ:
ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,600-39,100 ವೇತನ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ISEC Recruitment 2023- ಅಪ್ಲಿಕೇಶನ್
ISEC Recruitment 2023 ನೋಟಿಫಿಕೇಶನ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರಿಜಿಸ್ಟ್ರಾರ್
ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ
ನಾಗರಭಾವಿ
ಬೆಂಗಳೂರು-560072
ಅಥವಾ ಇ-ಮೇಲ್ ಐಡಿ recruitment@isec.ac.in ಗೆ ಕಳುಹಿಸಬೇಕು.
ಇದನ್ನೂ ಓದಿ: Bengaluru Metro Jobs: ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ಡಿಪ್ಲೊಮಾ ಆಗಿದ್ರೆ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 12, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ