Jawahar Navodaya Vidyalaya Recruitment 2023: ಜವಹರ್ ನವೋದಯ ವಿದ್ಯಾಲಯವು ಖಾಲಿ ಇರುವ ಶಿಕ್ಷಕ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸುತ್ತಿದೆ. ಹಲವು ಮಾಧ್ಯಮಿಕ ಶಾಲಾ ಶಿಕ್ಷಕ (TGT- ಟ್ರೇನ್ಡ್ ಗ್ರಾಜುಯೇಟ್ ಟೀಚರ್) ಮತ್ತು ಪ್ರೌಢ ಶಾಲಾ ಶಿಕ್ಷಕ (PGT- ಪೋಸ್ಟ್ ಗ್ರಾಜುಯೇಟ್ ಟೀಚರ್) ಹುದ್ದೆಗಳು ಖಾಲಿ ಇವೆ. ಶಿಕ್ಷಕ ಹುದ್ದೆ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಇದೇ ಜನವರಿ 16 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದೆ ಎಂದು ವಿದ್ಯಾಲಯವು ನೋಟಿಫಿಕೇಶನ್ನಲ್ಲಿ ತಿಳಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಯಾದಗಿರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ navodaya.gov.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುಲರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜವಹರ್ ನವೋದಯ ವಿದ್ಯಾಲಯ |
ಹುದ್ದೆ | ಶಿಕ್ಷಕ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಯಾದಗಿರಿ |
ಸಂದರ್ಶನ ನಡೆಯುವ ಸ್ಥಳ | ಜವಹರ್ ನವೋದಯ ವಿದ್ಯಾಲಯಹೊತ್ಪೇಟ್ಯಾದಗಿರಿ |
ಸಂದರ್ಶನ ನಡೆಯುವ ದಿನಾಂಕ | ಜನವರಿ 16, 2023 |
ಅಧಿಕೃತ ವೆಬ್ಸೈಟ್ | navodaya.gov.in |
ಹುದ್ದೆಯ ಮಾಹಿತಿ:
PGT- ಭೌತಶಾಸ್ತ್ರ
PGT- ಐಟಿ
TGT- ಗಣಿತ
TGT-ಇಂಗ್ಲಿಷ್
ಈ ವಿಷಯಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 12/01/2023
ಸಂದರ್ಶನ ನಡೆಯುವ ದಿನ: ಜನವರಿ 16, 2023 ಬೆಳಗ್ಗೆ 11 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ
ಜವಹರ್ ನವೋದಯ ವಿದ್ಯಾಲಯ
ಹೊತ್ಪೇಟ್
ಯಾದಗಿರಿ
ಕರ್ನಾಟಕ
ಇದನ್ನೂ ಓದಿ: ITI, ಡಿಪ್ಲೊಮಾ ಪಾಸಾದವರಿಗೆ ಸಂಸ್ಕೃತಿ ಸಚಿವಾಲಯದಲ್ಲಿದೆ ಬಂಪರ್ ಉದ್ಯೋಗ- ಈಗಲೇ ಅಪ್ಲೈ ಮಾಡಿ
ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಎಲ್ಲಾ ಶೈಕ್ಷಣಿಕ ದಾಖಲೆ ಮತ್ತು ಅನುಭವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತರಬೇಕು.
ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ