Kanara College Society Kumta Recruitment 2023: ಟೀಚಿಂಗ್ ಫೀಲ್ಡ್ನಲ್ಲಿ ಆಸಕ್ತಿ ಇದ್ದು, ಕೆಲಸ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ ಸುವರ್ಣಾವಕಾಶ. ಕೆನರಾ ಕಾಲೇಜು ಸೊಸೈಟಿ ಕುಮಟಾ(Kanara College Society Kumta ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಅಸಿಸ್ಟೆಂಟ್ ಪ್ರೊಫೆಸರ್(Assistant Professor), ಲೈಬ್ರರಿಯನ್ (Librarian) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಈ ಕೂಡಲೇ ಅರ್ಜಿ ಹಾಕಿ. ಮಾರ್ಚ್ 1, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್(Post) ಮೂಲಕ ಅಪ್ಲಿಕೇಶನ್ ಹಾಕಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೆನರಾ ಕಾಲೇಜು ಸೊಸೈಟಿ ಕುಮಟಾ |
ಹುದ್ದೆ | ಅಸಿಸ್ಟೆಂಟ್ ಪ್ರೊಫೆಸರ್, ಲೈಬ್ರರಿಯನ್ |
ಒಟ್ಟು ಹುದ್ದೆ | 7 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ, ಪಿಎಚ್.ಡಿ, NET, SLET |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಉತ್ತರ ಕನ್ನಡ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 1, 2023 |
ಇದನ್ನೂ ಓದಿ: Teaching Jobs: ಕೇಂದ್ರೀಯ ವಿದ್ಯಾಲಯ ಜಾಲಹಳ್ಳಿಯಲ್ಲಿ ಟೀಚರ್ ಹುದ್ದೆಗಳಿಗೆ ಅರ್ಜಿ ಹಾಕಿ
ವಿದ್ಯಾರ್ಹತೆ:
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್.ಡಿ, NET, SLET ಪೂರ್ಣಗೊಳಿಸಿರಬೇಕು.
ಎಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು?
ಶೇ.55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
SC/ST ಅಭ್ಯರ್ಥಿಗಳು- ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 1, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು - 5 ವರ್ಷ
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
SC/ST/ಪ್ರವರ್ಗ-1 ಅಭ್ಯರ್ಥಿಗಳು- 1000 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 2000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ಇದನ್ನೂ ಓದಿ: High School Teacher Jobs: ಬೆಂಗಳೂರಿನಲ್ಲಿ ಹೈಸ್ಕೂಲ್ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
ನಿಯಮಾನುಸಾರ
ಉದ್ಯೋಗದ ಸ್ಥಳ:
ಉತ್ತರ ಕನ್ನಡ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕಾರ್ಯದರ್ಶಿ
ಕೆನರಾ ಕಾಲೇಜು ಸೊಸೈಟಿ(R)
ಕುಮಟಾ- 581362 (U.K)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 1, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ