Mysore University Recruitment 2023: ಮೈಸೂರು ವಿಶ್ವವಿದ್ಯಾಲಯ (Mysore University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೇಟಾ ಎಂಟ್ರಿ ಆಪರೇಟರ್ & ಫೀಲ್ಡ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಮೈಸೂರು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಸಂಸ್ಥೆ | ಮೈಸೂರು ವಿಶ್ವವಿದ್ಯಾಲಯ |
ಹುದ್ದೆ | ಡೇಟಾ ಎಂಟ್ರಿ ಆಪರೇಟರ್ & ಫೀಲ್ಡ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 20,000 |
ಉದ್ಯೋಗದ ಸ್ಥಳ | ಮೈಸೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 10, 2023 |
ಇದನ್ನೂ ಓದಿ: UPSC Recruitment 2023: ಸೆಕ್ರೆಟರಿ, ಡೈರೆಕ್ಟರ್ ಹುದ್ದೆ ಸೇರಿ 20 ಪೋಸ್ಟ್ಗಳ ಭರ್ತಿ- ಈಗಲೇ ಅರ್ಜಿ ಹಾಕಿ
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಡಾ. ಡಿ ಸಿ ನಂಜುಂಡ
ಸೆಂಟರ್ ಫಾರ್ ಸೋಶಿಯಲ್ ಎಕ್ಸ್‌ಕ್ಲೂಷನ್ ಮತ್ತು ಇನ್‌ಕ್ಲೂಸಿವ್ ಪಾಲಿಸಿ
ಹ್ಯುಮಾನಿಟೀಸ್ ಬ್ಲಾಕ್ (ಮಾನಸಗಂಗೋತ್ರಿ)
ಮೈಸೂರು ವಿಶ್ವವಿದ್ಯಾನಿಲಯ
ಮೈಸೂರು-06
ಅಥವಾ ಅರ್ಜಿಯನ್ನು ಇ-ಮೇಲ್ ಐಡಿ anthroedit@ymail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9008164514 ಕರೆ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 10, 2023
ಹುದ್ದೆಯ ಕುರಿತಾದ ನೋಟಿಫಿಕೇಶನ್ PDF ಇಲ್ಲಿದೆ: Mysore University- ನೋಟಿಫಿಕೇಶನ್
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ