TISS Recruitment 2022: ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್(Tata Institute of Social Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಫೀಲ್ಡ್ ಇನ್ವೆಸ್ಟಿಗೇಟರ್(Field Investigator) ಹುದ್ದೆಗಳು ಖಾಲಿ ಇವೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 14, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ನಿಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ |
ಹುದ್ದೆ | ಫೀಲ್ಡ್ ಇನ್ವೆಸ್ಟಿಗೇಟರ್ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತದಲ್ಲಿಎಲ್ಲಿ ಬೇಕಾದರೂ |
ವಿದ್ಯಾರ್ಹತೆ | ಪದವಿ |
ಶೈಕ್ಷಣಿಕ ಅರ್ಹತೆ ಏನಿರಬೇಕು?
ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: PGCIL Recruitment 2022: ನೀವು ಡಿಪ್ಲೊಮಾ ಪಾಸಾಗಿದ್ರೆ ಇಲ್ಲಿದೆ 1.17 ಲಕ್ಷ ಸಂಬಳದ ಉದ್ಯೋಗ- ಈಗಲೇ ಅಪ್ಲೈ ಮಾಡಿ
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಐಡಿ shssprojects.tiss@gmail.com ಗೆ ಡಿಸೆಂಬರ್ 14, 2022ಕ್ಕೆ ಮುನ್ನ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/12/2022
ಇ-ಮೇಲ್ ಕಳುಹಿಸಲು ಕೊನೆ ದಿನ: 14/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ