Jobs in Tumkur: ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿದೆ ಉದ್ಯೋಗ; ತಿಂಗಳಿಗೆ 33,450 ರೂ ವೇತನ

ಶಿಕ್ಷಣ ಸಂಸ್ಥೆಯ ಫ್ರೌಢ ಶಾಲೆಯಲ್ಲಿ ಕಾರ್ಯ ನಿರ್ವಹಿಸಲು ವಿಜ್ಞಾನ ಸಹ ಶಿಕ್ಷಕರ ಹುದ್ದೆಗೆ ನೇಮಕಾತಿ ಹೊರಡಿಸಲಾಗಿದೆ.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
    ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ (Tumakuru Siddharta Education Institute) ಬೋಧಕ ಹುದ್ದೆಗೆ (Teaching Job) ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಸಂಸ್ಥೆಯ ಫ್ರೌಢ ಶಾಲೆಯಲ್ಲಿ ಕಾರ್ಯ ನಿರ್ವಹಿಸಲು ವಿಜ್ಞಾನ ಸಹ ಶಿಕ್ಷಕರ ಹುದ್ದೆಗೆ ನೇಮಕಾತಿ ಹೊರಡಿಸಲಾಗಿದೆ. ಸಿಬಿಎಡ್​​ ವಿಜ್ಞಾನ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.

    ಈ ಹುದ್ದೆಯನ್ನು 2ಎ ಗ್ರಾಮೀಣ ಅಭ್ಯರ್ಥಿಗಳಿಗೆ ಮೀಸಲಾಗಿರಿಸಲಾಗಿದೆ. ಶಿಕ್ಷಣ ಸಂಸ್ಥೆಯ ಅನುದಾನಿತ ಪ್ರೌಢ ಶಾಲೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಬೋಧಕ ವೃತ್ತಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆಹುದ್ದೆ ಸಂಖ್ಯೆ
    ಸಂಸ್ಥೆಸಿದ್ಧಾರ್ಥ ಶಿಕ್ಷಣ ಸಂಸ್ಥೆ
    ಹುದ್ದೆವಿಜ್ಞಾನ ಸಹ ಶಿಕ್ಷಕರು
    ಹುದ್ದೆ ಸಂಖ್ಯೆ1
    ಕಾರ್ಯ ನಿರ್ವಹಣೆ ಸ್ಥಳತುಮಕೂರು
    ವೇತನ33,450-62600 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ರಸಾಯನ ಶಾಸ್ತ್ರ. ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ ಐಚ್ಛಿಕ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ಜೊತೆಗೆ ಬಿಎಡ್​ ಪದವೀಧರರಾಗಿರಬೇಕು.

    ಇದನ್ನು ಓದಿ: ದಾವಣೆಗೆರೆಯಲ್ಲಿ 82 ಅಂಗನವಾಡಿ ಕಾರ್ಯಕರ್ತರ ಹುದ್ದೆ; ಜು. 29 ಅರ್ಜಿ ಸಲ್ಲಿಕೆಗೆ ಕಡೆಯ ದಿನ

    ವಯೋಮಿತಿ: ಅಧಿಸೂಚನೆ ಅನ್ವಯ ಅಭ್ಯರ್ಥಿಯು ಕನಿಷ್ಠ 20 ಮತ್ತು ಗರಿಷ್ಠ 43 ವರ್ಷ ವಯೋಮಿತಿ ಮೀರಿರಬಾರದು.

    ಅರ್ಜಿ ಸಲ್ಲಿಕೆ: ಆಫ್​​ಲೈನ್​

    ಅರ್ಜಿ ಶುಲ್ಕ: 300 ರೂ

    ಅರ್ಜಿ ಶುಲ್ಕ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಇವರ ಹೆಸರಿನಲ್ಲಿ ಡಿಡಿ ತೆಗೆದು ಅರ್ಜಿ ಲಕೋಟೆ ಜೊತೆಯಲ್ಲಿ ಸಲ್ಲಿಸಬೇಕು.

    ಇದನ್ನು ಓದಿ: ಕೆಪಿಎಸ್​ಸಿಯಿಂದ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 37900 ರೂ ವೇತನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.

    ಅರ್ಜಿ ಸಲ್ಲಿಕೆ ವಿಳಾಸ
    ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥನಗರ ಅಂಚೆ, ತುಮಕೂರು ತಾಲ್ಲೂಕು, ತುಮಕೂರು ಜಿಲ್ಲೆ - 572107
    Published by:Seema R
    First published: