ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ (Tumkur District Court) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 51 ಹುದ್ದೆಗಳ ಭರ್ತಿಗೆ ಜಿಲ್ಲಾ ಇ ಕೋರ್ಟ್ ಭರ್ತಿಗೆ ಮುಂದಾಗಿದೆ. ಮಾಸಿಕ 28 ಸಾವಿರದವರೆಗೆ ವೇತನ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ.
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ 4 ಬ್ಯಾಕ್ಲಾಕ್ ಮತ್ತು ಹೊಸದಾಗಿ 47 ಹುದ್ದೆಗಳ ನೇಮಕಾತಿ, ಆಯ್ಕೆ ಪ್ರಕ್ರಿಯೆ, ವೇತನ ಸೇರಿದಂತೆ ಇನ್ನಿತರ ಮಾಹಿತಿಗಳು ಹೆಳಕಂಡಂತೆ ಇದೆ
ಹುದ್ದೆ ಮಾಹಿತಿ |
ವಿವರ |
ಸಂಸ್ಥೆ |
ತುಮಕೂರು ಇಕೋರ್ಟ್ |
ಹುದ್ದೆಗಳ ಸಂಖ್ಯೆ |
51 |
ಉದ್ಯೋಗ ಸ್ಥಳ |
ತುಮಕೂರು |
ವಿದ್ಯಾರ್ಹತೆವಿದ್ಯಾರ್ಹತೆ |
ಎಸ್ಎಸ್ಎಲ್ಸಿ |
ಹುದ್ದೆಯ ಹೆಸರು |
ಪ್ಯೂನ್ (ಜವಾನ) |
ವೇತನ |
ರೂ.17000-28950 ರೂ ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ: ತುಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 38 ವರ್ಷ
ಪ.ಜಾ. ಪ. ಪಂ, ಪ್ರವರ್ಗ ಅಭ್ಯರ್ಥಿಗಳಿಗೆ 40 ವರ್ಷ
ಆಯ್ಕೆ ವಿಧಾನ:
ಮೆರಿಟ್ ಪಟ್ಟಿ ಮತ್ತು ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ- 200 ರೂ
ಪ.ಜಾ. ಪ. ಪಂ, ಪ್ರವರ್ಗ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ.
ಶುಲ್ಕ ಪಾವತಿ ವಿಧಾನ
ಆನ್ ಲೈನ್
ಹುದ್ದಗೆ ನಿಗದಿಪಡಿಸಿರುವ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/tumkuronlinerecruitment ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online payment through net banking / credit card / debit card / challan download ¸ಮೂಲಕ ಪಾವತಿಸತಕ್ಕದ್ದು. ಅಥವಾ ಚಲನ್ ಪ್ರತಿ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗೆ ಹಾಜರಾಗಿ ಕೂಡ ಶುಲ್ಕವನ್ನು ಪಾವತಿಸಬಹುದು.
ಇದನ್ನು ಓದಿ: ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ವಾಕ್ ಇನ್ ಇಂಟರ್ವ್ಯೂ
ಪ್ರಮುಖ ದಿನಾಂಕಗಳು
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 30, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಆನ್ಲೈನ್ನಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಜೂನ್ 15, 2022
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಜೂನ್ 17, 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
districts.ecourts.gov.in
ಅರ್ಜಿ ಸಲ್ಲಿಕೆ
-ತುಮಕೂರು ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಬಳಿಕ ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ
-ತುಮಕೂರು ಜಿಲ್ಲಾ ನ್ಯಾಯಾಲಯದ districts.ecourts.gov.in ತಾಣಕ್ಕೆ ಭೇಟಿ ನೀಡಿ ಪ್ಯೂನ್ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ.
ಇದನ್ನು ಓದಿ: ಬಳ್ಳಾರಿ ಗ್ರಾಮ ಪಂಚಾಯತ್ನಲ್ಲಿ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ
-ತುಮಕೂರು ಜಿಲ್ಲಾ ನ್ಯಾಯಾಲಯದ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
-ತುಮಕೂರು ಜಿಲ್ಲಾ ನ್ಯಾಯಾಲಯದ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೆರೆ ಹಿಡಿಯಿರಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ