Tumkur University Recruitment 2021: ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!

ಪೋಸ್ಟ್ ಗ್ರಾಜುಯೇಟ್ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು  ಸಲ್ಲಿಸಬಹುದು.

JOB

JOB

 • Share this:
  ತುಮಕೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ  2 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಜೂನ್ 10,2021ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  ವಿದ್ಯಾರ್ಹತೆ:

  ಪೋಸ್ಟ್ ಗ್ರಾಜುಯೇಟ್ ಮತ್ತು ಎಂ.ಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು  ಸಲ್ಲಿಸಬಹುದು.

  ವೇತನ:

  ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ 17,000ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ 15,000 ರೂ ವೇತನವನ್ನು ಸಿಗಲಿದೆ.

  ಆಯ್ಕೆ ಪ್ರಕ್ರಿಯೆ:

  ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  ಅರ್ಜಿ ಸಲ್ಲಿಸುವುದು ಹೇಗೆ:

  ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಜೂನ್ 10,2021ರೊಳಗೆ ತಲುಪಿಸಬೇಕಿರುತ್ತದೆ.

  ಕಚೇರಿ ವಿಳಾಸ:

  Dr. Ramesh Salian,
  Principal investigator,
  ICSSR Research Project,
  University College Arts,
  Tumkur University,
  Tumkuru-572 103.
  First published: