ತುಮಕೂರು ವಿಶ್ವವಿದ್ಯಾಲಯದಲ್ಲಿ (Tumkur University) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗೆ ವಿವಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 9 ಆಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರ ನೇಮಕಾತಿಗೆ ತುಮಕೂರು ವಿಶ್ವ ವಿದ್ಯಾಲಯ ಮುಂದಾಗಿದೆ. ಅದರ ಅನುಸಾರವಾಗಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಗಿದೆ. ಉಪನ್ಯಾಸಕ ವೃತ್ತಿ ಎದುರು ನೋಡುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ. ಇನ್ನು ಈ ಹುದ್ದೆ ಆಯ್ಕೆ, ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಕೆಳಕಂಡಂತೆ ಇದೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ವಿಶ್ವವಿದ್ಯಾಲಯ |
ತುಮಕೂರು ವಿಶ್ವವಿದ್ಯಾಲಯ |
ಹುದ್ದೆ ಸಂಖ್ಯೆ |
ನಿರ್ದಿಷ್ಟಪಡಿಸಲಾಗಿಲ್ಲ |
ಉದ್ಯೋಗ ಸ್ಥಳ |
ತುಮಕೂರು |
ಹುದ್ದೆ ಹೆಸರು |
ಅತಿಥಿ ಉಪನ್ಯಾಸಕರು |
ವೇತನ |
ತುಮಕೂರು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ |
ಯಾವ ವಿಷಯದ ಉಪನ್ಯಾಸಕರು
ಸ್ನಾತಕ ಪದವಿಯಲ್ಲಿ ಪರಿಸರ ವಿಜ್ಞಾನ ಮತ್ತು ಗಣಕ ವಿಜ್ಞಾನ ಪದವಿ ಬೋಧನೆ ಮಾಡಲು ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ.
ಸ್ನಾತಕೋತ್ತರ ಪದವಿಯಲ್ಲಿ ರಸಾಯನ ಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಪರಿಸರ ವಿಜ್ಞಾನ ವಿಷಯಗಳ ಬೋಧನೆ ಮಾಡಲು ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ.
ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿ: ತುಮಕೂರು ವಿಶ್ವವಿದ್ಯಾನಿಲಯದ ನೇಮಕಾತಿ ನಿಯಮಗಳ ಪ್ರಕಾರ
ಇದನ್ನು ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ; 2410 ಹುದ್ದೆಗಳ ನೇಮಕಾತಿ
ವಯೋಮಿತಿ ಸಡಿಲಿಕೆ:
ತುಮಕೂರು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 2, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 9, 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: tumkuruniversity.ac.in
ಇದನ್ನು ಓದಿ: 98 ವೈದ್ಯ ಹುದ್ದೆಗಳ ನೇಮಕಾತಿಗೆ ಒಎನ್ಜಿಸಿ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ
-ತುಮಕೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ತುಮಕೂರು ವಿಶ್ವವಿದ್ಯಾನಿಲಯದ ಅತಿಥಿ ಅಧ್ಯಾಪಕರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
-ಅದರಲ್ಲಿ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ .
-ತುಮಕೂರು ವಿಶ್ವವಿದ್ಯಾಲಯದ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
-ತುಮಕೂರು ವಿಶ್ವವಿದ್ಯಾನಿಲಯ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ