UCIL Recruitment 2021: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 46,000

ಫೋರ್​​ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 3 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಇರಬೇಕು.

UCIL

UCIL

  • Share this:
UCIL Recruitment 2021: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್(Uranium Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಫೋರ್​​ಮ್ಯಾನ್(Foreman)​(ಮೈನಿಂಗ್) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೋಮಾ(Diploma) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಫೋರ್​ಮ್ಯಾನ್(Foreman) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ನವೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.ucil.gov.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.











































ಸಂಸ್ಥೆ ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರು ಫೋರ್​​ಮ್ಯಾನ್
ಒಟ್ಟು ಹುದ್ದೆಗಳು 16
ವಿದ್ಯಾರ್ಹತೆ ಡಿಪ್ಲೋಮಾ
ಉದ್ಯೋಗದ ಸ್ಥಳ ಜಾರ್ಖಂಡ್
ವೇತನ ಮಾಸಿಕ ₹ 46,020
ಅರ್ಜಿ ಸಲ್ಲಿಕೆ ವಿಧಾನ ಆಫ್​​​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 11/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/12/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/12/2021

ಇದನ್ನೂ ಓದಿ: KPSC Recruitment 2021: ತಿಂಗಳಿಗೆ ₹ 41,500 ಸಂಬಳ, KPSCಯಲ್ಲಿ 14 ಡ್ರೈವರ್ ಹುದ್ದೆಗಳು ಖಾಲಿ

ವಿದ್ಯಾರ್ಹತೆ:

ಫೋರ್​​ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 3 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಇರಬೇಕು.

ವಯೋಮಿತಿ:

ಫೋರ್​​ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ:

ಫೋರ್​​ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 46,020 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: BHEL Recruitment 2021: ತಿಂಗಳಿಗೆ ₹83,000 ಸಂಬಳ, MBBS ಪದವೀಧರರಿಗೆ BHELನಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್
ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್
ಪಿ.ಒ. ಜಿಡುಗುಡ ಮೈನ್ಸ್​, ಸಿಂಗ್​​ಭುಮ್ ಈಸ್ಟ್​
ಜಾರ್ಖಂಡ್- 832102


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: