• Home
  • »
  • News
  • »
  • jobs
  • »
  • UCO Bank Recruitment: ಡಿಗ್ರಿ ಆದವರಿಗೆ ಯುಕೋ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

UCO Bank Recruitment: ಡಿಗ್ರಿ ಆದವರಿಗೆ ಯುಕೋ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

UCO

UCO

ಬ್ಯಾಂಕಿಂಗ್​ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  • Share this:

    ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಅಥವಾ ಯುಕೋ ಬ್ಯಾಂಕ್​ನಲ್ಲಿ (UCO Bank) ಸೆಕ್ಯುರಿಟಿ ಆಫೀಸರ್ (Security Officer)​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 19 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಬ್ಯಾಂಕ್ ಹೆಸರುಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO ಬ್ಯಾಂಕ್)
    ಹುದ್ದೆಯ ಹೆಸರುಭದ್ರತಾ ಅಧಿಕಾರಿ
    ಹುದ್ದೆಗಳ ಸಂಖ್ಯೆ10
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ36000-63840

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.


    ಇದನ್ನು ಓದಿ: ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹುದ್ದೆ ನೇಮಕಾತಿ


    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು:  5 ವರ್ಷಗಳು


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಅಭ್ಯರ್ಥಿಗಳು: 100 ರೂ.
    ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳು: 500 ರೂ.


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 19 ಅಕ್ಟೋಬರ್​ 2022


    ಇದನ್ನು ಓದಿ: 1591 ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ


     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: ucobank.com


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: