ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ (Udupi DC Office) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 41 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಈ ಹುದ್ದೆಗಳಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಜಿಲ್ಲಾಧಿಕಾರಿ ಕಚೇರಿ
ಹುದ್ದೆಗಳ ಸಂಖ್ಯೆ: 41
ಉದ್ಯೋಗ ಸ್ಥಳ: ಉಡುಪಿ
ಹುದ್ದೆಯ ಹೆಸರು: ಲೋಡರ್ಗಳು, ಕ್ಲೀನರ್ಗಳು
ವೇತನ: ರೂ.17000-28950 ರೂ ಮಾಸಿಕ
ಹುದ್ದೆಗಳು |
ಹುದ್ದೆ ಸಂಖ್ಯೆ |
ಲೋಡರ್ |
33 |
ಕ್ಲೀನರ್ |
8 |
ವಿದ್ಯಾರ್ಹತೆ
ಉಡುಪಿ ಜಿಲ್ಲಾಧಿಕಾರಿ ಕಚೇರಿಯ ನಿಯಮದ ಅನುಸಾರ
ಕನಿಷ್ಠ ಅರ್ಹತೆ
ಕನ್ನಡ ಮಾತನಾಡಲು ಗೊತ್ತಿರಬೇಕು.
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರಲ್ಸ್, ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನಾ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಿಂದ ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಇದನ್ನು ಓದಿ: ಟ್ರೈನಿ ಮೈನಿಂಗ್ ಇಂಜಿನಿಯರಿಂಗ್ ಹುದ್ದೆಗೆ ವಾಕ್-ಇನ್-ಇಂಟರ್ವ್ಯೂ
ವಯೋಮಿತಿ
ಕನಿಷ್ಠ 18 ವರ್ಷ ಆಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ 55 ಮೀರಿರಬಾರದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಮೇ 21, 2022
ಅರ್ಜಿ ಸಲ್ಲಿಕೆ ಕಡೆಯ ದಿನಾಂಕ: ಜೂನ್ 21, 2022
ಆಯ್ಕೆ ವಿಧಾನ
ಸಂದರ್ಶನದ ಮುಖಾಂತರ
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ನೋಡಲು
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
udupi.nic.in
ಅರ್ಜಿ ಸಲ್ಲಿಕೆ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ಪದವೀಧರರಿಗೆ ಉದ್ಯೋಗಾವಕಾಶ; ವ್ಯವಸ್ಥಾಪಕರು ಮತ್ತು ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
ನಿಗದಿತ ಅರ್ಜಿಗಳನ್ನು ಉಡುಪಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿ ಮತ್ತು ಆಯಾ ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ಪಡೆಯಬಹುದು.
ಅರ್ಜಿದಾರರು ಅರ್ಜಿ ನಮೂನೆಯನ್ನು ಪಡೆದ ಬಳಿಕ ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಸಲ್ಲಿಸಬೇಕು.
ಜಿಲ್ಲಾ ನಗರಾಭಿವೃದ್ಧಿ ಕೋಶ (DUDC), ಜಿಲ್ಲಾಧಿಕಾರಿ ಕಚೇರಿ, ಉಡುಪಿ,
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ