UGC Recruitment 2021: ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(University Grants Commission), ನವದೆಹಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗುತ್ತಿಗೆ ಆಧಾರ(Contract Base)ದ ಮೇಲೆ ಅಕಾಡೆಮಿಕ್ ಕನ್ಸಲ್ಟೆಂಟ್(Academic Consultant) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಜಿಸಿಯ(UGC) ಅಧಿಕೃತ ವೆಬ್ಸೈಟ್(Official Website) ugc.ac.in/jobs ಗೆ ಭೇಟಿ ನೀಡಿ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ |
ಹುದ್ದೆಯ ಹೆಸರು | ಅಕಾಡೆಮಿಕ್ ಕನ್ಸಲ್ಟೆಂಟ್ |
ಒಟ್ಟು ಹುದ್ದೆಗಳು | 01 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ & NET ಉತ್ತೀರ್ಣ |
ಸಂಬಳ | ಮಾಸಿಕ ₹ 70,000- ₹ 80,000 ದವರೆಗೆ. |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31/10/2021 |
ಅಕಾಡೆಮಿಕ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಸೆಲೆಕ್ಷನ್ ಕಮಿಟಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎನ್ಇಟಿ(NET) ಪಾಸಾಗಿರಬೇಕು.
ಸಂಬಳ:
ಅಕಾಡೆಮಿಕ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳಿಗೆ ₹ 70,000- ₹ 80,000 ದವರೆಗೆ ಸಂಬಳ ನೀಡಲಾಗುತ್ತದೆ.
ಪ್ರಮುಖ ಸೂಚನೆ:
ಹುದ್ದೆಗಳ ಸಂಖ್ಯೆ ಬದಲಾಗಬಹುದು. ಯಾವುದೇ ಕಾರಣ ನೀಡದೆ ಹುದ್ದೆಯನ್ನು ಭರ್ತಿ ಮಾಡದಿರುವ ಹಕ್ಕನ್ನು ಯುಜಿಸಿ ಕಾಯ್ದಿರಿಸಿದೆ. ಈ ನಿಟ್ಟಿನಲ್ಲಿ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಯ ಅಧಿಕೃತ ವೆಬ್ಸೈಟ್ ugc.ac.in/jobs.ಗೆ ಭೇಟಿ ನೀಡಬಹುದು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ