UPSC Recruitment 2022: ಸೈಂಟಿಸ್ಟ್​ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಸೆ.15 ಕಡೆಯ ದಿನ

ಕೇಂದ್ರ ಸರ್ಕಾರಿ ನೌಕರಿಗೆ ತಯಾರಿ ನಡೆಸುತ್ತಿರುವ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

687 ಹುದ್ದೆಗೆ ಅರ್ಜಿ ಹಾಕಿ

687 ಹುದ್ದೆಗೆ ಅರ್ಜಿ ಹಾಕಿ

  • Share this:
    ಕೇಂದ್ರ ಲೋಕ ಸೇವಾ ಆಯೋಗದಲ್ಲಿ (Union Public Service Commission)  ವಿವಿಧ ಹುದ್ದೆಗಳಿಗೆ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ ಹುದ್ದೆಗಳು ಸೇರಿದಂತೆ ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಹೊರಡಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರಿಗೆ ತಯಾರಿ ನಡೆಸುತ್ತಿರುವ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 15 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕೇಂದ್ರ ಲೋಕ ಸೇವಾ ಆಯೋಗ
    ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ವಿಜ್ಞಾನಿ
    ಹುದ್ದೆಗಳ ಸಂಖ್ಯೆ: 19
    ಉದ್ಯೋಗ ಸ್ಥಳ: ನವದೆಹಲಿ - ಕೋಲ್ಕತ್ತಾ - ಹೈದರಾಬಾದ್ - ಅಖಿಲ ಭಾರತ
    ವೇತನ: ಯುಪಿಎಸ್​ಸಿ ನಿಯಮಗಳ ಪ್ರಕಾರ




















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
    ಮಾನವಶಾಸ್ತ್ರಜ್ಞ1ಮಾನವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 38 ವರ್ಷ
    ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ4ಎಂಎಸ್ಸಿಗರಿಷ್ಟ 30 ವರ್ಷ
    ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್)1ಭೌತಶಾಸ್ತ್ರ / ಗಣಿತ / ಅನ್ವಯಿಕ ಗಣಿತ / ನ್ಯಾಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
    ವಿಜ್ಞಾನಿ ಬಿ (ಫೊರೆನ್ಸಿಕ್ ಎಲೆಕ್ಟ್ರಾನಿಕ್ಸ್)3ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್/ಫೋರೆನ್ಸಿಕ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
    ವಿಜ್ಞಾನಿ ಬಿ (ಫೊರೆನ್ಸಿಕ್ ಸೈಕಾಲಜಿ)3ಸೈಕಾಲಜಿ/ಕ್ರಿಮಿನಾಲಜಿ, ಫೊರೆನ್ಸಿಕ್ ಸೈನ್ಸ್/ಸೈಕಾಲಜಿ/ಕ್ರಿಮಿನಾಲಜಿಯಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
    ಪುನರ್ವಸತಿ ಅಧಿಕಾರಿ4ಸಮಾಜಕಾರ್ಯ/ಸಮಾಜಶಾಸ್ತ್ರ/ಶಿಕ್ಷಣ/ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 30 ವರ್ಷ
    ಉಪ ಮಹಾನಿರ್ದೇಶಕರು/ಪ್ರಾದೇಶಿಕ ನಿರ್ದೇಶಕರು3ವಿದೇಶಿ ಭಾಷಾ ಕೋರ್ಸ್‌ನೊಂದಿಗೆ ಡಿಪ್ಲೊಮಾ, ಪದವಿಗರಿಷ್ಟ 50 ವರ್ಷ


    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ಕೇಂದ್ರ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಅವಕಾಶ; ಎಸ್​ಎಸ್​ಸಿ ಸಿಜಿಲ್​ ಅಧಿಸೂಚನೆ ಬಿಡುಗಡೆ

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ವಿಕಲಚೇತನ, ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್​​ 2022
    ಸಂಪೂರ್ಣವಾಗಿ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 16 ಸೆಪ್ಟೆಂಬರ್ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: upsc.gov.in

    ಇದನ್ನು ಓದಿ: 2500 ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ: ಶೀಘ್ರದಲ್ಲೇ ಅಧಿಸೂಚನೆ ಪ್ರಕಟ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: