• Home
  • »
  • News
  • »
  • jobs
  • »
  • UPSC Recruitment: ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

UPSC Recruitment: ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ.

  • Share this:

    ಕೇಂದ್ರ ಲೋಕ ಸೇವಾ ಆಯೋಗದಿಂದ (Union Public Service Commission) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪೆಷಲಿಸ್ಟ್​, ಪಶು ವೈದ್ಯ ಸೇರಿದಂತೆ ಒಟ್ಟು 52 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಹುದ್ದೆ ನಿರೀಕ್ಷೆಯಲ್ಲಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
    ಹುದ್ದೆಯ ಹೆಸರು: ತಜ್ಞ, ಪಶುವೈದ್ಯಾಧಿಕಾರಿ
    ಹುದ್ದೆಗಳ ಸಂಖ್ಯೆ: 52
    ಉದ್ಯೋಗ ಸ್ಥಳ: ಅಖಿಲ ಭಾರತ
    ಸಂಬಳ: UPSC ನಿಯಮಗಳ ಪ್ರಕಾರ

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
    ಪ್ರಾಸಿಕ್ಯೂಟರ್12ಕಾನೂನು ಪದವಿಗರಿಷ್ಟ 30 ವರ್ಷ
    ತಜ್ಞ28ಎಂಬಿಬಿಎಸ್​, ಎಂಡಿಗರಿಷ್ಟ 40 ವರ್ಷ
    ಸಹಾಯಕ ಪ್ರಾಧ್ಯಾಪಕರು (ಆಯುರ್ವೇದ)1ಆರ್ಯವೇದ ಸ್ನಾತಕೋತ್ತರ ಪದವಿಗರಿಷ್ಟ 50 ವರ್ಷ
    ಸಹಾಯಕ ಪ್ರಾಧ್ಯಾಪಕರು (ಯುನಾನಿ)1ಯುನಾನಿ ಸ್ನಾತಕೋತ್ತರ ಪದವಿಗರಿಷ್ಟ 48 ವರ್ಷ
    ಪಶುವೈದ್ಯಾಧಿಕಾರಿ10ಯುಪಿಎಸ್​ಸಿ ನಿಯಮದ ಪ್ರಕಾರಗರಿಷ್ಟ 35 ವರ್ಷ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು


    ಇದನ್ನು ಓದಿ: ಸಶಸ್ತ್ರ ಸೀಮಾ ಬಲದಲ್ಲಿ 399 ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಅಕ್ಟೋಬರ್​​ 2022


    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: upsc.gov.in


    ಇದನ್ನು ಓದಿ: ಮಾರ್ಕೆಂಟಿಂಗ್​ ಮ್ಯಾನೇಜರ್ ಹುದ್ದೆಗೆ Walk-in-Interview; ತಿಂಗಳಿಗೆ 50 ಸಾವಿರ ರೂ ವೇತನ


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ

    Published by:Seema R
    First published: