Court Jobs: ರಾಜ್ಯದ 4 ಜಿಲ್ಲಾ ನ್ಯಾಯಾಲಯಗಳಲ್ಲಿದೆ ಕೆಲಸ ಖಾಲಿ; ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ

ರಾಜ್ಯದ ಯಾವ ಯಾವ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆ ಮಾಹಿತಿ

ಹುದ್ದೆ ಮಾಹಿತಿ

 • Share this:
  ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ (Karnataka District Courts) ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆ (Notification) ಹೊರಡಿಸಲಾಗಿದೆ. ಟೈಪಿಸ್ಟ್ (Typist)​, ಟೈಪಿಸ್ಟ್​- ಕಾಪಿಸ್ಟ್ (Typist-copyist)​, ಜವಾನ (Peon) ಸೇರಿದಂತೆ ಪ್ರಮುಖ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪದವಿ ಅಭ್ಯರ್ಥಿಗಳು ಈ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದ ಯಾವ ಯಾವ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

  ರಾಮನಗರ ಜಿಲ್ಲಾ ನ್ಯಾಯಾಲಯ (Ramanagara District Court) ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್​ಎಸ್​ಎಲ್​ಸಿ ಪಾಸ್​ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 20 ಆಗಿದೆ.

  ಈ ಹುದ್ದೆಯ ಸಂಪೂರ್ಣ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ

  ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ (Chikkamagaluru District Court) ಘಟಕದ ವಿವಿಧ ನ್ಯಾಯಾಲಯಗಳನ್ನು ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೈಪಿಸ್ಟ್ (Typist)​, ಕಾಪಿಸ್ಟ್(Copyist)​, ಜವಾನ (Peon) ಸೇರಿದಂತೆ ಒಟ್ಟು 20 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 15 ಆಗಿದೆ.

  ಈ ಹುದ್ದೆಯ ಸಂಪೂರ್ಣ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿದೆ ವಿವಿಧ ಹುದ್ದೆ; ಎಸ್​ಎಸ್​ಎಲ್​ಸಿ, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

  ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Udupi District Court) ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಟೈಪಿಸ್ಟ್- ಕಾಪಿಸ್ಟ್ (Typist- Copyist)​​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್​ಲೈನ್​ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 26 ಆಗಿದೆ.

  ಈ ಹುದ್ದೆಯ ಸಂಪೂರ್ಣ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ: ಉಡುಪಿ ಕೋರ್ಟ್​ನಲ್ಲಿದೆ ಟೈಪಿಸ್ಟ್​ ಹುದ್ದೆ; ತಿಂಗಳಿಗೆ 42000ದವರೆಗೆ ವೇತನ

  ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Chikkaballapur District Court)  ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್​​, ಟೈಪಿಸ್ಟ್​​ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್​ಲೈನ್​ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 27 ಆಗಿದೆ.

  ಈ ಹುದ್ದೆಯ ಸಂಪೂರ್ಣ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
  Published by:Seema R
  First published: