Govt Jobs: ರಾಜ್ಯದ ವಿವಿಧ ಜಿಲ್ಲಾ ಪಂಚಾಯತ್​ನಲ್ಲಿದೆ ಉದ್ಯೋಗ; ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ರಾಜ್ಯದ ಜಿಲ್ಲಾ ಪಂಚಾಯತ್​ನಲ್ಲಿ (Zilla Panchayat) ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಾಲ ಕಾಲಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಎಸ್​ಎಸ್​ಎಲ್​ಸಿ, ಪಿಯುಸಿ ಪದವೀಧರ ಅಭ್ಯರ್ಥಿಗಳಿಗೆ ಈ ಮೂಲಕ ಜಿಲ್ಲೆಯಲ್ಲಿ ಉದ್ಯೋಗ ಅವಕಾಶ ದೊರೆಯಲಿದೆ. ಪ್ರಸ್ತುತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಗದಗದಲ್ಲಿದೆ ಎಡಿಪಿಎಂ ಹುದ್ದೆ
    ಗದಗ ಜಿಲ್ಲಾ ಪಂಚಾಯತ್​ನಲ್ಲಿ (Gadag Zilla Panchayat) ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (Assistant District Project Manager- ADPM) ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಇ-ಪಂಚಾಯತ್​ ಯೋಜನೆ ಅಡಿ ಕಾರ್ಯ ನಿರ್ವಹಿಸಲು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 16 ಆಗಿದೆ.

    ಗದಗ ಜಿಲ್ಲಾ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆ ಮಾಹಿತಿ

    ಕೋಲಾರದಲ್ಲಿದೆ 46 ಹುದ್ದೆಗಳು
    ಕೋಲಾರ ಜಿಲ್ಲಾ ಪಂಚಾಯತ್ (Kolar Zilla Panchayat)​ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಗ್ರಾಮ ಪಂಚಾಯತ್​ನಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಟೆಂಡೆಂಟ್ (Attendant)​, ಡಾಟಾ ಎಂಟ್ರಿ ಆಪರೇಟರ್​​ ಮತ್ತು ಕ್ಲರ್ಕ್ (Data Entry operator and Clerk)​ ಸೇರಿದಂತೆ ಒಟ್ಟು 46 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆಯನ್ನು ಆಫ್​ಲೈನ್​ ಮೂಲಕ ಮಾಡಬೇಕಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 24 ಆಗಿದೆ.

    ಕೋಲಾರ ಜಿಲ್ಲಾ ಪಂಚಾಯತ್​ನಲ್ಲಿದೆ 46 ಹುದ್ದೆ; ಲಿಖಿತ ಪರೀಕ್ಷೆ ಇಲ್ಲ, ನೇರ ನೇಮಕಾತಿ

    ಚಾಮರಾಜನಗರ ಜಿಲ್ಲೆಯಲ್ಲಿದೆ ಉದ್ಯೋಗ

    ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department) ಹಿರಿಯ ವಿಶ್ಲೇಷಕ (Senior Analyst) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ.

    ಚಾಮರಾಮನಗರದಲ್ಲಿ ಹಿರಿಯ ವಿಶ್ಲೇಷಕ ಹುದ್ದೆಗೆ ಅರ್ಜಿ ಆಹ್ವಾನ

    ವಿಶೇಷ ಸೂಚನೆ: ಮೇಲ್ಕಂಡ ಹುದ್ದೆಗಳ ಲಿಂಕ್​ಗಳನ್ನು ಕ್ಲಿಕ್​ ಮಾಡುವ ಮೂಲಕ ಆಯಾ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ
    Published by:Seema R
    First published: