Belagavi Zilla Panchayat: ಬೆಳಗಾವಿ ಜಿಲ್ಲಾ ಪಂಚಾಯತ್​ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುವುದು. 

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಬೆಳಗಾವಿ ಜಿಲ್ಲಾ ಪಂಚಾಯತ್​ನಿಂದ(Belagavi Zilla Panchayat)  ವಿವಿಧ ತಾಂತ್ರಿಕ ಸಹಾಯಕ (Technical Assistant) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ನರೇಗಾ ಯೋಜನೆ ಅಡಿ ಕೃಷಿ, ರೆಷ್ಮೇ, ತೋಟಗಾರಿ ಮತ್ತು ಅರಣ್ಯ ಇಲಾಖಯಲ್ಲಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಇ-ಮೇಲ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಜ ಆಗಸ್ಟ್​ 29 ಆಗಿದೆ.

    ಈ ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಬೆಳಗಾವಿ ಜಿಲ್ಲಾ ಪಂಚಾಯತ್
    ಹುದ್ದೆಯ ಹೆಸರು: ತಾಂತ್ರಿಕ ಸಹಾಯಕ
    ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳ: ಬೆಳಗಾವಿ
    ವೇತನ: ಬೆಳಗಾವಿ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ























    ಹುದ್ದೆವಿದ್ಯಾರ್ಹತೆ
    ತಾಂತ್ರಿಕ ಸಹಾಯಕ (ಕೃಷಿ)ಕೃಷಿಯಲ್ಲಿ ಎಂಎಸ್ಸಿ ಪದವಿ
    ತಾಂತ್ರಿಕ ಸಹಾಯಕ (ರೇಷ್ಮೆ)ರೇಷ್ಮೆ ಕೃಷಿಯಲ್ಲಿ ಎಂಎಸ್ಸಿ ಪದವಿ
    ತಾಂತ್ರಿಕ ಸಹಾಯಕ (ತೋಟಗಾರಿಕೆ)ತೋಟಗಾರಿಕೆಯಲ್ಲಿ ಎಂಎಸ್ಸಿ ಪದವಿ
    ತಾಂತ್ರಿಕ ಸಹಾಯಕ (ಅರಣ್ಯಶಾಸ್ತ್ರ)ಅರಣ್ಯಶಾಸ್ತ್ರದಲ್ಲಿ ಎಂಎಸ್ಸಿ ಪದವಿ

    ವಯೋಮಿತಿ: ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಬೆಳಗಾವಿ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ

    ಇದನ್ನು ಓದಿ: ಕನ್ಸಲ್ಟೇಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 65000 ರೂ ವೇತನ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: zpbelagavi.kar.nic.in

    ಇದನ್ನು ಓದಿ: ಕೊಡಗಿನಲ್ಲಿ 62 ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ನೇಮಕಾತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: