Vijayapura Anganwadi Recruitment 2022: ವಿಜಯಪುರ ಜಿಲ್ಲೆ (Vijayapura District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 171 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಮಾರ್ಚ್ 3ರವರೆಗೆ ಅರ್ಜಿ ಹಾಕಬಹುದು. ಫೆಬ್ರವರಿ 07 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ವಿಜಯಪುರ |
ಹುದ್ದೆಯ ಹೆಸರು |
ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ |
ಒಟ್ಟು ಹುದ್ದೆಗಳು |
171 |
ವಿದ್ಯಾರ್ಹತೆ |
10ನೇ ತರಗತಿ, 4ನೇ ತರಗತಿ ಉತ್ತೀರ್ಣ |
ಕೆಲಸದ ಸ್ಥಳ |
ವಿಜಯಪುರ |
ವಯೋಮಿತಿ |
18-35 ವರ್ಷ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
07/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
03/03/2022 |
ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 15 ಹುದ್ದೆಗಳು
ಅಂಗನವಾಡಿ ಸಹಾಯಕಿ: 156 ಹುದ್ದೆಗಳು
ಒಟ್ಟು-171 ಹುದ್ದೆಗಳು
ಇದನ್ನೂ ಓದಿ:NMDC Recruitment 2022: ಮಾಸಿಕ ವೇತನ ₹ 35,000, ITI, Diploma ಪಾಸಾದವರಿಗೆ ಬಂಪರ್ ಉದ್ಯೋಗ
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ಎಸ್ಎಸ್ಎಲ್ಸಿ
ಅಂಗನವಾಡಿ ಸಹಾಯಕಿ: 4ನೇ ತರಗತಿ, 9ನೇ ತರಗತಿ
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ:KPCL Recruitment 2022: ತಿಂಗಳಿಗೆ ₹ 75,000 ಸಂಬಳ, ಕರ್ನಾಟಕ ಪವರ್ ಕಾರ್ಪೊರೇಷನ್ನಲ್ಲಿ ಉದ್ಯೋಗ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/03/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ