ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಒಟ್ಟು 40 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Jobs In Bagalkote) ಹೊರಡಿಸಲಾಗಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ (ವಿಮೂಲ್) ವಿವಿಧ ವಿಭಾಗಗಳಲ್ಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸಹಾಯಕ ವ್ಯವಸ್ಥಾಪಕರು, ಕಿರಿಯ ತಾಂತ್ರಿಕರು ಸೇರಿದಂತೆ ಒಟ್ಟು 40 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ನೇರ ನೇಮಕಾತಿ ಮೂಲಕ ಈ ಹುದ್ದೆ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆಯ ಹೆಸರು | ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ |
ಹುದ್ದೆಗಳ ಸಂಖ್ಯೆ | 40 |
ವಿದ್ಯಾರ್ಹತೆಯ ವಿವರ | ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ |
ವೇತನ | 21,400 ರೂ.ನಿಂದ 97,100 ರೂ.ವರೆಗೆ |
ಕೊನೆಯ ದಿನಾಂಕ | ಏಪ್ರಿಲ್ 25 |
ವಿದ್ಯಾರ್ಹತೆಯ ವಿವರ ಹೀಗಿದೆ
ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿವಿಎಸ್‌ಸಿ, ಬಿ.ಎಸ್‌ಸಿ, ಬಿ.ಕಾಂ, ಬಿಬಿಎ, ಬಿ.ಎಸ್ಸಿ, ಪಿಯುಸಿ, ಎಸ್‌ಎಸ್‌ಎಲ್ ಸಿಯಲ್ಲಿ ಹೀಗೆ ಈ ಎಲ್ಲ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿಯ ವಿವರಗಳಿವು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಇದನ್ನೂ ಓದಿ: Jobs In Kalaburagi: ವಿವಿಧ ಕಂಪನಿಗಳಿಂದ ನೇರ ಸಂದರ್ಶನ, ಇಲ್ಲಿದೆ ವಿವರ
ವೇತನ ಎಷ್ಟು?
ವಿವಿಧ ಹುದ್ದೆಗಳ ಶ್ರೇಣಿಗೆ ಅನುಸಾರವಾಗಿ 21,400 ರೂ.ನಿಂದ 97,100 ರೂ.ವರೆಗೆ ವೇತನ ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 25 ಆಗಿದೆ. ಅರ್ಜಿ ಶುಲ್ಕ ಪಾವತಿಗೂ ಏಪ್ರಿಲ್ 25 ಕಡೆಯ ದಿನ ಆಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಈ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ವರದಿ: ಪ್ರಶಾಂತ ಹೂಗಾರ, ನ್ಯೂಸ್ 18 ಕನ್ನಡ, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ