• Home
  • »
  • News
  • »
  • jobs
  • »
  • VSSC Recruitment: ನೀವು ಡಿಪ್ಲೋಮಾ ಪಾಸಾಗಿದ್ರೆ ವಿಕ್ರಂ ಸಾರಾಭಾಯಿ ಸ್ಪೇಸ್ ಸೆಂಟರ್​​ನಲ್ಲಿದೆ ಬಂಪರ್ ಉದ್ಯೋಗ

VSSC Recruitment: ನೀವು ಡಿಪ್ಲೋಮಾ ಪಾಸಾಗಿದ್ರೆ ವಿಕ್ರಂ ಸಾರಾಭಾಯಿ ಸ್ಪೇಸ್ ಸೆಂಟರ್​​ನಲ್ಲಿದೆ ಬಂಪರ್ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ನವೆಂಬರ್ 12, 2022ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಿ.

  • Share this:

    VSSC Recruitment 2022: ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರವು (Vikram Sarabhai Space Centre) ಖಾಲಿ ಇರುವ 162 ಟೆಕ್ನಿಷಿಯನ್ ಅಪ್ರೆಂಟಿಸ್(Technician Apprentice) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು(Candidates) ಈ ಕೂಡಲೇ ಅರ್ಜಿ ಸಲ್ಲಿಸಿ, ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ನವೆಂಬರ್ 12, 2022ರಂದು ನಡೆಯಲಿರುವ ಸಂದರ್ಶನದಲ್ಲಿ ಪಾಲ್ಗೊಳ್ಳಿ.


    ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ
    ಹುದ್ದೆಯ ಹೆಸರುಟೆಕ್ನಿಷಿಯನ್ ಅಪ್ರೆಂಟಿಸ್
    ಒಟ್ಟು ಹುದ್ದೆ162
    ವಿದ್ಯಾರ್ಹತೆಡಿಪ್ಲೋಮಾ
    ವೇತನಮಾಸಿಕ ₹ 8,000
    ಸಂದರ್ಶನ ನಡೆಯುವ ದಿನ12/11/2022


    ಹುದ್ದೆಯ ಮಾಹಿತಿ:
    ಆಟೋಮೊಬೈಲ್ ಎಂಜಿನಿಯರಿಂಗ್ -8
    ಕೆಮಿಕಲ್ ಎಂಜನಿಯರಿಂಗ್-25
    ಸಿವಿಲ್ ಎಂಜಿನಿಯರಿಂಗ್-8
    ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್-15
    ಎಲೆಕ್ಟ್ರಿಕಲ್ ಎಂಜಿನಿಯರಿಂಗ್- 10
    ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್- 40
    ಇನ್​ಸ್ಟ್ರುಮೆಂಟ್ ಟೆಕ್ನಾಲಜಿ-6
    ಮೆಕ್ಯಾನಿಕಲ್ ಎಂಜಿನಿಯರಿಂಗ್- 50


    ಇದನ್ನೂ ಓದಿ: JOB ALERT: ನೀವು 10ನೇ ತರಗತಿ ಪಾಸಾಗಿದ್ರೆ 20 ಸಾವಿರ ಸಂಬಳ ಸಿಗುತ್ತೆ, ಇಲ್ಲಿದೆ ಉದ್ಯೋಗ ಮಾಹಿತಿ


    ವಿದ್ಯಾರ್ಹತೆ:
    ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು- 3 ವರ್ಷ
    ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ
    PWD ಅಭ್ಯರ್ಥಿಗಳು- 10 ವರ್ಷ


    ವೇತನ: ಮಾಸಿಕ ₹ 8,000


    ಆಯ್ಕೆ ಪ್ರಕ್ರಿಯೆ:
    ಟೆಕ್ನಿಷಿಯನ್ ಅಪ್ರೆಂಟಿಸ್​ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.


    ಇದನ್ನೂ ಓದಿ: JOB ALERT: ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ 194 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು ಖಾಲಿ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


    ಸೇಂಟ್ ಮೇರಿಸ್ ಹೈಯರ್ ಸೆಕೆಂಡರಿ ಸ್ಕೂಲ್
    ಪಟ್ಟಾಂ
    ತಿರುವನಂತಪುರಂ
    ಕೇರಳ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/11/2022
    ಸಂದರ್ಶನ ನಡೆಯುವ ದಿನ: 12/11/2022

    Published by:Latha CG
    First published: