Jobs in Belagavi: ಬೆಳಗಾವಿಯ ಎನ್​ಐಟಿಎಂನಲ್ಲಿದೆ ಡೇಟಾ ಎಂಟ್ರಿ ಆಪರೇಟರ್​ ಹುದ್ದೆ; ವಾಕ್​ ಇನ್​ನಲ್ಲಿ ಭಾಗಿಯಾಗಿ

ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಒಪ್ಪಂದ ಆಧಾರಿತ ತಾತ್ಕಾಲಿಕ ಹುದ್ದೆ ಇದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಳಗಾವಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನಲ್ಲಿ (National Institute of Traditional Medicine) ಡೇಟಾ ಎಂಟ್ರಿ ಆಪರೇಟರ್ (Data Entry Operator) ​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಒಪ್ಪಂದ ಆಧಾರಿತ ತಾತ್ಕಾಲಿಕ ಹುದ್ದೆ ಇದಾಗಿದೆ. ಈ ಹುದ್ದೆಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಬೆಳಗಾವಿಯ ಎನ್​ಐಟಿಎಂನಲ್ಲಿ ಆಗಸ್ಟ್​ 10ರಂದು ಈ ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ ನಡೆಯಲಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ (NITM ಬೆಳಗಾವಿ)
    ಹುದ್ದೆಡೇಟಾ ಎಂಟ್ರಿ ಆಪರೇಟರ್ (DEO)
    ಒಟ್ಟು ಹುದ್ದೆ1
    ಕಾರ್ಯ ನಿರ್ವಹಣೆ ಸ್ಥಳಬೆಳಗಾವಿ
    ವೇತನ25000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿಜ್ಞಾನದಲ್ಲಿ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷಗಳು.

    ಇದನ್ನು ಓದಿ: 72 ಗ್ರೂಪ್​ 'ಬಿ' ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಕೆಪಿಎಸ್​ಸಿ; ಇಲ್ಲಿದೆ ಉದ್ಯೋಗ ಮಾಹಿತಿ

    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನಿಯಮಗಳ ಪ್ರಕಾರ

    ವಿಶೇಷ ಸೂಚನೆ
    ಅಭ್ಯರ್ಥಿಗಳು ಸರ್ಕಾರ ಸ್ವಾಯತ್ತ, ಪಿಎಸ್​ಯು ಅಥವಾ ಯಾವುದೇ ಇತರೆ ಮಾನ್ಯತೆ ಪಡೆದ ಸಂಸ್ಥೆ EDP ​​ಕೆಲಸದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
    ಅಭ್ಯರ್ಥಿಯು ಗಂಟೆಗೆ 8000 ಪದಗಳ ವೇಗದ ಟೈಪಿಂಗ್​ ಕೌಶಲ್ಯ ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ
    ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 29 ಜುಲೈ 2022
    ವಾಕ್-ಇನ್ ದಿನಾಂಕ: 10 ಆಗಸ್ಟ್ 2022 ಬೆಳಗ್ಗೆ 9. 30ಕ್ಕೆ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: icmrnitm.res.in

    ಇದನ್ನು ಓದಿ: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

    ನೇರ ಸಂದರ್ಶನದ ವೇಳೆ ಈ ದಾಖಲೆ ಅವಶ್ಯ

    ನೇರ ಸಂದರ್ಶನದ ದಿನ ನೀಡುವ ನಿಗದಿತ ಅರ್ಜಿಯನ್ನು ಅಭ್ಯರ್ಥಿಗಳು ಭರ್ತಿ ಮಾಡಬೇಕಿದೆ. ಇದರ ಜೊತೆಗೆ ಈ ದಾಖಲೆಗಳನ್ನು ಲಗತ್ತಿಸುವುದು ಅವಶ್ಯವಾಗಿದೆ.

    -ಎರಡು ಪಾಸಪೋರ್ಸ್​ ಸೈಜ್​ ಫೋಟೋ
    -ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್​ಎಸ್​ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
    -ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರ

    ನೇರ ಸಂದರ್ಶನ ನಡೆಯುವ ಸ್ಥಳ: ICMR - ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್, ನೆಹರು ನಗರ, ಬೆಳಗಾವಿ - 590010
    Published by:Seema R
    First published: