ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಅರೆಕಾಲಿಕ ಶಿಕ್ಷಕರ (Part Time Teachers) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿ ಸಂಖ್ಯಾಶಾಸ್ತ್ರ (Statistics) ವಿಭಾಗದಲ್ಲಿ ಕಾರ್ಯ ನಿರ್ವಹಿಸಲು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಂಎಸ್ಸಿ ಸಂಖ್ಯಾಶಾಸ್ತ್ರದ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 2 ಆಗಿದೆ. ಈ ಹುದ್ದೆಗೆ ನೇರ ಸಂದರ್ಶನದ (Walk- in- Interview) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜುಲೈ 2 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.
ಕೃಷಿ ವಿಶ್ವವಿದ್ಯಾಲಯ ಆಹ್ವಾನಿಸಿರುವ ಈ ಹುದ್ದೆಯೂ ತಾತ್ಕಲಿಕವಾಗಿದೆ. 179 ದಿನಗಳ ಅವಧಿಯ ಹುದ್ದೆ ಇದಾಗಿದ್ದು, ಎರಡು ಅಭ್ಯರ್ಥಿಗಳ ಭರ್ತಿಗೆ ವಿಶ್ವವಿದ್ಯಾಲಯ ಮುಂದಾಗಿದೆ. ಈ ಹುದ್ದೆ ನೇಮಕಾತಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ |
ಹುದ್ದೆ |
ಸಂಸ್ಥೆ |
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆಗಳ ಸಂಖ್ಯೆ |
02 |
ಉದ್ಯೋಗ ಸ್ಥಳ |
ಧಾರವಾಡ |
ಹುದ್ದೆಯ ಹೆಸರು |
ಅರೆಕಾಲಿಕ ಶಿಕ್ಷಕ |
ಸಂಬಳ |
40000 ರೂ ಪ್ರತಿ ತಿಂಗಳು |
ವಿದ್ಯಾರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಎಂಎಸ್ಸಿ ಅಗ್ರಿಕಲ್ಚರ್ ಪದವಿ ಪೂರ್ಣಗೊಳಿಸಿರಬೇಕು. ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎಸ್ಸಿ ಸ್ಟಾಟಿಸ್ಟಿಕ್ನಲ್ಲಿ ಪದವಿ ಹೊಂದಿರಬೇಕು.
ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಇದನ್ನು ಓದಿ: ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರು ನೇಮಕಾತಿ
ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ
ಆಯ್ಕೆ ಪ್ರಕ್ರಿಯೆ
ನೇರ ಸಂದರ್ಶನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 18 ಜೂನ್ 2022
ವಾಕ್-ಇನ್ ದಿನಾಂಕ: 02 ಜುಲೈ 2022 ಬೆಳಗ್ಗೆ 11ಕ್ಕೆ
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
uasd.edu
ಇದನ್ನು ಓದಿ: ಎಸ್ಎಸ್ಎಲ್ಸಿ, ಪಿಯುಸಿ ಆಗಿದ್ರೆ ಬೇಗ ಅರ್ಜಿ ಸಲ್ಲಿಸಿ
ಈ ದಾಖಲೆಗಳು ನೇರ ಸಂದರ್ಶನದ ದಿನ ಅವಶ್ಯಕ
ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ವೇಳೆ ನೀಡಲಾದ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ನೇರ ಸಂದರ್ಶನಕ್ಕೆ ಕೊಂಡೊಯ್ಯವುದು ಅವಶ್ಯ.
ಪದವಿ ಮತ್ತು 10ನೇ ತರಗತಿ ಮಾರ್ಕ್ಸ್ ಕಾರ್ಡ್
ಸಕ್ಷಮ ಅಧಿಕಾರಿಗಳು ನೀಡಿದ ಅನುಭವ ಪ್ರಮಾಣಪತ್ರಗಳು/ಯಾವುದೇ ಸಂಬಂಧಿತ ಪ್ರಮಾಣಪತ್ರಗಳು/ ಪ್ರಶಂಸಾಪತ್ರಗಳು.
ಜಾತಿ ಪ್ರಮಾಣ ಪತ್ರ
ನಾನ್-ಕ್ರೀಮಿ ಲೇಯರ್ ಪ್ರಮಾಣಪತ್ರ ಅತ್ಯಗತ್ಯ
ಶೈಕ್ಷಣಿಕ ಅರ್ಹತೆ ಸಂಬಂಧಿಸಿದ ಯಾವುದೇ ಇತರ ಸಂಬಂಧಿತ ಮಾಹಿತಿ.
ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಮುಖಂಡವಾಗಿ ಪೋಸ್ಟ್ ಅಥವಾ ಖುದ್ದಾಗಿ ಕಚೇರಿಗೆ ಬಂದು ಸಲ್ಲಿಸುವಂತಿಲ್ಲ. ನೇರ ಸಂದರ್ಶನದ ದಿನವೇ ಅದನ್ನು ಪಡೆಯಲಾಗುವುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ