Jobs in NITK: ಎನ್​ಐಟಿಕೆಯಲ್ಲಿ 14 ಬೋಧಕ ಹುದ್ದೆಗಳಿಗೆ ವಾಕ್​-ಇನ್​-ಇಂಟರ್ವ್ಯೂ

ಆಗಸ್ಟ್​ 17ರಂದು ಸಂಸ್ಥೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.

ಎನ್​​ಐಟಿಕೆ

ಎನ್​​ಐಟಿಕೆ

  • Share this:
    ಮಂಗಳೂರಿನ ಸುರತ್ಕಲ್​ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (National Institute of Technology Karnataka) ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 14 ತಾತ್ಕಾಲಿಕ ಫ್ಯಾಕಲ್ಟಿ ಹುದ್ದೆಗೆ (Faculty Posts) ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಗಸ್ಟ್​ 17ರಂದು ಸಂಸ್ಥೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ವಾಕ್​ ಇನ್​ ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.

    ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
    ಹುದ್ದೆಯ ಹೆಸರು: ತಾತ್ಕಾಲಿಕ ಬೋಧಕ ಸಿಬ್ಬಂದಿ
    ಹುದ್ದೆಗಳ ಸಂಖ್ಯೆ: 14
    ಉದ್ಯೋಗ ಸ್ಥಳ: ಸುರತ್ಕಲ್ - ಕರ್ನಾಟಕ
    ವೇತನ: 40000-50000 ರೂ ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಫಾಕಲ್ಟಿ  500006ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎಂಇ ಅಥವಾ ಎಂಟೆಕ್50000 ರೂ ಮಾಸಿಕ
    ಮಾಹಿತಿ ತಂತ್ರಜ್ಞಾನ8ಕಂಪ್ಯೂಟರ್ ಸೈನ್ಸ್/ ಮಾಹಿತಿ ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎಂಇ ಅಥವಾ ಎಂಟೆಕ್40000 ರೂ ಮಾಸಿಕ

    ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ

    ವಯೋಮಿತಿ ಸಡಿಲಿಕೆ:
    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ನೇರ ಸಂದರ್ಶನ

    ನೇರ ಸಂದರ್ಶನ ನಡೆಯುವ ದಿನಾಂಕ
    17 ಆಗಸ್ಟ್​​ 2022ರ ಬೆಳಗ್ಗೆ 8. 30ಕ್ಕೆ

    ವಿಶೇಷ ಸೂಚನೆ: 

    ನೇರ ಸಂದರ್ಶನ ನಡೆಯುವ ದಿನಾಂಕದಂದೇ 11 ಗಂಟೆಗೆ ಅಧಿಕೃತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಹೊರಡಿಸಲಾಗುವುದು.

    ಇದನ್ನು ಓದಿ: ನವ ಮಂಗಳೂರು ಬಂದರಿನಲ್ಲಿದೆ ಉದ್ಯೋಗಾವಕಾಶ; ಮಾಸಿಕ 50 ಸಾವಿರ ರೂ ವೇತನ

    ನೇರ ಸಂದರ್ಶನದ ವಿಳಾಸ
    ಬೋರ್ಡ್​ ರೂಮ್​, ಮುಖ್ಯ ಆಡಳಿತಾತ್ಮಕ ಕಟ್ಟಡ, ಎನ್​ಐಟಿಕೆ, ಸುರತ್ಕಲ್​

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 5 ಆಗಸ್ಟ್​ 2022
    ವಾಕ್-ಇನ್ ದಿನಾಂಕ: 17 ಆಗಸ್ಟ್​ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nitk.ac.in

    ನೇರ ಸಂದರ್ಶನದಲ್ಲಿ ಅಗತ್ಯವಾಗಿ ಕೊಂಡೊಯ್ಯಬೇಕಾದ ದಾಖಲೆ

    ಆಸಕ್ತ ಅಭ್ಯರ್ಥಿಗಳು ಭರ್ತಿಯಾದ ಅರ್ಜಿಯನ್ನು ನೇರ ಸಂದರ್ಶನಕ್ಕೆ ಕೊಂಡೊಯ್ಯವುದು ಅವಶ್ಯ.
    ಪದವಿ ಮತ್ತು 10ನೇ ತರಗತಿ ಮಾರ್ಕ್ಸ್​ ಕಾರ್ಡ್​​
    ಸಕ್ಷಮ ಅಧಿಕಾರಿಗಳು ನೀಡಿದ ಅನುಭವ ಪ್ರಮಾಣಪತ್ರಗಳು/ಯಾವುದೇ ಸಂಬಂಧಿತ ಪ್ರಮಾಣಪತ್ರಗಳು/ ಪ್ರಶಂಸಾಪತ್ರಗಳು.
    ಜಾತಿ ಪ್ರಮಾಣ ಪತ್ರ
    ನಾನ್-ಕ್ರೀಮಿ ಲೇಯರ್ ಪ್ರಮಾಣಪತ್ರ ಅತ್ಯಗತ್ಯ
    ಶೈಕ್ಷಣಿಕ ಅರ್ಹತೆ ಸಂಬಂಧಿಸಿದ ಯಾವುದೇ ಇತರ ಸಂಬಂಧಿತ ಮಾಹಿತಿ.
    Published by:Seema R
    First published: