WAPCOS Recruitment 2023: ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್(Water and Power Consultancy Services Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ನೀರಾವರಿ ತಜ್ಞ, ಸಂವಹನ ತಜ್ಞ, ಕೃಷಿ ಅರ್ಥಶಾಸ್ತ್ರಜ್ಞ, ಮಾನಿಟರಿಂಗ್ ಮತ್ತು ಮೌಲ್ಯಮಾಪನ ತಜ್ಞ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಫೆಬ್ರವರಿ 7, 2023 ಅರ್ಜಿ ಹಾಕಲು ಕೊನೆಯ ದಿನ(Last Date)ವಾಗಿದ್ದು, ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ |
ಹುದ್ದೆ | ನೀರಾವರಿ ತಜ್ಞ, ಸಂವಹನ ತಜ್ಞ, ಕೃಷಿ ಅರ್ಥಶಾಸ್ತ್ರಜ್ಞ, ಮಾನಿಟರಿಂಗ್ ಮತ್ತು ಮೌಲ್ಯಮಾಪನ ತಜ್ಞ |
ಒಟ್ಟು ಹುದ್ದೆ | 4 |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ವೇತನ | ಮಾಸಿಕ ₹ 80,000-1,00,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 7, 2023 |
ಇದನ್ನೂ ಓದಿ: DCC Bank: ಬೆಂಗಳೂರಿನ ಡಿಸಿಸಿ ಬ್ಯಾಂಕ್ನಲ್ಲಿ 96 ಹುದ್ದೆಗಳು ಖಾಲಿ- SSLC ಪಾಸಾದವರೂ ಅರ್ಜಿ ಹಾಕಿ
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಸಂವಹನ ತಜ್ಞ- ಮಾಸಿಕ ₹ 80,000
ಕೃಷಿ ಅರ್ಥಶಾಸ್ತ್ರಜ್ಞ- ಮಾಸಿಕ ₹ 80,000
ಮಾನಿಟರಿಂಗ್ ಮತ್ತು ಮೌಲ್ಯಮಾಪನ ತಜ್ಞ- ಮಾಸಿಕ ₹ 1,00,000
ನೀರಾವರಿ ತಜ್ಞ- ಮಾಸಿಕ ₹ 80,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 7ಕ್ಕೆ ಮುನ್ನ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳುಹಿಸಬೇಕು.
ಮುಖ್ಯಸ್ಥರು(HR)
WAPCOS ಲಿಮಿಟೆಡ್
ಪ್ಲಾಟ್ ನಂ.76-ಸಿ
ಇನ್ಸ್ಟಿಟ್ಯೂಶನಲ್ ಏರಿಯಾ
ಸೆಕ್ಟರ್- 18
ಗುರುಗ್ರಾಮ
ಹರಿಯಾಣ-122015
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 7, 2023
ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 0124-2399421-36 ಗೆ ಸಂಪರ್ಕಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ