ಕೊಪ್ಪಳದ ಶ್ರೀ ಗವಿ ಸಿದ್ದೇಶ್ವರ ಬಾಲಕರ ಉಚಿತ ವಸತಿ ಮತ್ತು ಪ್ರಸಾದ ನಿಲಯದಲ್ಲಿ (Shree Gavisiddeshwara Boys Free Hostel )ವಾರ್ಡನ್ (Warden) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಕ್ಕಳನ್ನು ನಿರ್ವಹಿಸುವ ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಅಲ್ಲಿಸಬಹುದಾಗಿದೆ. ಈ ಸಂಬಂಧ ಗವಿಮಠ (Gavi Mutt, Koppal) ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 25 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಶಿಕ್ಷಣ ಸಂಸ್ಥೆಯಲ್ಲಿ ಸೇನಾನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆ ಮಾಹಿತಿ | ಹುದ್ದೆ ವಿವರ |
ಸಂಸ್ಥೆ | ಶ್ರೀ ಗವಿಸಿದ್ದೇಶ್ವರ ಸಂಸ್ಥಾನ, ಶ್ರೀ ಗವಿಮಠ |
ಹುದ್ದೆ | ವಾರ್ಡನ್ |
ಒಟ್ಟು ಹುದ್ದೆ ಸಂಖ್ಯೆ | ನಿಗದಿಪಡಿಸಿಲ್ಲ |
ಕಾರ್ಯ ನಿರ್ವಹಣೆ ಸ್ಥಳ | ಕೊಪ್ಪಳ |
ವೇತನ | ಗವಿಮಠದ ನಿಯಮ ಅನುಸಾರ |
ಇದನ್ನು ಓದಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಯುವ ವೃತ್ತಿಪರರ ಹುದ್ದೆ; ತಿಂಗಳಿಗೆ 30 ಸಾವಿರ ರೂ ವೇತನ
ವಯೋಮಿತಿ: ಗವಿಮಠದ ನಿಯಮ ಅನುಸಾರ
ಅರ್ಜಿ ಸಲ್ಲಿಕೆ : ಆಫ್ಲೈನ್ ಅಥವಾ ಇಮೇಲ್ ಮುಖಾಂತರ
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಇಮೇಲ್ ವಿಳಾಸ: srigavimathkoppal@gmail.com
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 16 ಜುಲೈ 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: 25 ಜುಲೈ 2022
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಮಠದ ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಈ ಕೆಳಗಿನ ವಿಳಾಸಕ್ಕೆ ಅಂಚೆ, ಸ್ಪೀಡ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬೇಕು. ಜೊತೆಗೆ ಅರ್ಜಿಯ ಒಂದು ಪ್ರತಿಯನ್ನು ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಶ್ರೀ ಗವಿ ಸಿದ್ದೇಶ್ವರ ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ, ಪಿನ್ 583231
ಹೆಚ್ಚಿನ ಮಾಹಿತಿಗೆ 08539220212 ಅಥವಾ 9980899219ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ