• Home
  • »
  • News
  • »
  • jobs
  • »
  • JOBS: ಜಲಸಂಪನ್ಮೂಲ ಇಲಾಖೆಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 62,000

JOBS: ಜಲಸಂಪನ್ಮೂಲ ಇಲಾಖೆಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 62,000

ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರ

ನವೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಹೆಚ್ಚಿನ ಮಾಹಿತಿಗಾಗಿ https://waterresources.karnataka.gov.in/ ಗೆ ಭೇಟಿ ನೀಡಬಹುದು.

  • Share this:

    Water Resources Department Karnataka Recruitment 2022:  ಕರ್ನಾಟಕದ ಜಲಸಂಪನ್ಮೂಲ ಇಲಾಖೆಯಲ್ಲಿ 169 ಜೂನಿಯರ್ ಎಂಜಿನಿಯರ್(Junior Engineer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ(Job) ಹುಡುಕುತ್ತಿರುವವರು ಜಲಸಂಪನ್ಮೂಲ ಇಲಾಖೆಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಖಾಲಿ ಇರುವ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಿ​. ಅದರಲ್ಲೂ ಬೆಂಗಳೂರಿನಲ್ಲಿ ವೃತ್ತಿ ಮಾಡಲು ಬಯಸುವ ಉದ್ಯೋಗಾಂಕ್ಷಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಆಸಕ್ತರು ಕೂಡಲೇ ಸದುಪಯೋಗಪಡಿಸಿಕೊಳ್ಳಿ. ನವೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಹೆಚ್ಚಿನ ಮಾಹಿತಿಗಾಗಿ https://waterresources.karnataka.gov.in/ ಗೆ ಭೇಟಿ ನೀಡಬಹುದು.

    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಜಲಸಂಪನ್ಮೂಲ ಇಲಾಖೆ
    ಹುದ್ದೆಯ ಹೆಸರುಜೂನಿಯರ್ ಎಂಜಿನಿಯರ್
    ಒಟ್ಟು ಹುದ್ದೆ169
    ವಿದ್ಯಾರ್ಹತೆಡಿಪ್ಲೋಮಾ, ಬಿಇ, ಬಿ.ಟೆಕ್
    ಸ್ಥಳಕರ್ನಾಟಕ
    ವೇತನಮಾಸಿಕ ₹ 33,450-62,600
    ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ19/10/2022
    ಅರ್ಜಿ ಸಲ್ಲಿಸಲು ಕೊನೇ ದಿನ17/11/2022


    Water Resources Department Karnataka Recruitment 2022:


    ಅರ್ಹತಾ ಮಾನದಂಡಗಳೇನು?


    ಇದನ್ನೂ ಓದಿ:JOB ALERT: ಚಾಮರಾಜನಗರ ಕೋರ್ಟ್​​ನಲ್ಲಿ ಟೈಪಿಸ್ಟ್ ಹುದ್ದೆ ಖಾಲಿ, ತಿಂಗಳಿಗೆ ₹ 42,000 ಸಂಬಳ


    ಶೈಕ್ಷಣಿಕ ಅರ್ಹತೆ:
    ಜೂನಿಯರ್ ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೋಮಾ, ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದೊಳಗಿರಬೇಕು.


    ವೇತನ:
    ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 33,450-62,600 ವೇತನ ನೀಡಲಾಗುತ್ತದೆ.


    ಇದನ್ನೂ ಓದಿ: BEMLನಲ್ಲಿ ಕೆಲಸ ಖಾಲಿ ಇದೆ, BE, B Tech ಆಗಿದ್ರೆ ಅಪ್ಲೈ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2022

    Published by:Latha CG
    First published: