WCD Recruitment 2021: ರಾಯಚೂರು ಜಿಲ್ಲೆಯಲ್ಲಿ 25 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ - ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಗ್ರಾಮಗಳಲ್ಲಿ  ಹಾಗೂ ನಗರ ಪ್ರದೇಶಗಳಲ್ಲಿನ ಅಂಗನವಾಡಿ ಕೇಂದ್ರಗಳ ಹುದ್ದೆಗಳ ಭರ್ತಿಗೆ ಅರ್ಜಿ  ಆಹ್ವಾನಿಸಲಾಗಿದೆ.  ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಕ್ರಮವಾಗಿ 10ನೇ ತರಗತಿ ಪಾಸ್‌ ಮಾಡಿದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರಾಯಚೂರು ಅಂಗನವಾಡಿಯಲ್ಲಿ ಕಾರ್ಯಕರ್ತೆಯರ ಹುದ್ದೆ ಖಾಲಿ

ರಾಯಚೂರು ಅಂಗನವಾಡಿಯಲ್ಲಿ ಕಾರ್ಯಕರ್ತೆಯರ ಹುದ್ದೆ ಖಾಲಿ

  • Share this:
ರಾಯಚೂರು(Raichuru) ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ  ಹಾಗೂ ನಗರ ಪ್ರದೇಶಗಳಲ್ಲಿನ ಅಂಗನವಾಡಿ ಕೇಂದ್ರಗಳ ಹುದ್ದೆಗಳ ಭರ್ತಿಗೆ ಅರ್ಜಿ  ಆಹ್ವಾನಿಸಲಾಗಿದೆ.  ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಕ್ರಮವಾಗಿ 10ನೇ ತರಗತಿ ಪಾಸ್‌ ಮಾಡಿದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು : 25
ಅಂಗನವಾಡಿ ಸಹಾಯಕಿಯರ ಹುದ್ದೆಗಳು : 3

ಆನ್ಲೈನ್ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 12-10-2021
ಆನ್ಲೈನ್ಅರ್ಜಿಗೆ ಕೊನೆಯ ದಿನಾಂಕ : 13-11-2021

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ : www.anganwadirecruitment.kar.nic.inಇಲಾಖೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ ಕಾರ್ಯಕರ್ತೆ ಹುದ್ದೆಗಳು : 25
ಸಹಾಯಕಿಯರ ಹುದ್ದೆಗಳು : 3
ವಿದ್ಯಾರ್ಹತೆ ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ, ಸಹಾಯಕಿ ಹುದ್ದೆಗೆ 4ನೇ ತರಗತಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 13-11-2021
ವೇತನ 6000 to 10000
ವೆಬ್​ಸೈಟ್​  https://anganwadirecruit.kar.nic.in/

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ  

ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು.

ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 4ನೇ ತರಗತಿ ಪಾಸ್‌ ಆಗಿರಬೇಕು.

10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸುವ ವಿಧಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ www.anganwadirecruitment.kar.nic.in ಗೆ ಭೇಟಿ ನೀಡಿ.

ಹುದ್ದೆಯನ್ನು ಆಯ್ಕೆ ಮಾಡಿ. ಓಪನ್ ಆದ ಹೊಸ ಪೇಜ್‌ನಲ್ಲಿ ಅಗತ್ಯ ಮಾಹಿತಿಗಳನ್ನು  ಭರ್ತಿ  ಮಾಡಿ. ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಅಪ್‌ಲೋಡ್ ಮಾಡಿ.

ಅಪ್ಲಿಕೇಶನ್‌ ಸಲ್ಲಿಸುವಾಗ ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು
1. ಜನನ ಪ್ರಮಾಣ ಪತ್ರ ಅಥವಾ  ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
2. ವಾಸಸ್ಥಳ ದೃಢೀಕರಣ ಪತ್ರ.
3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
4. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.

ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

https://kannada.news18.com/news/jobs/jobs-in-karnataka-india-abroad-government-private-it-company-sector-business-own-interview-634247.html
Published by:Sandhya M
First published: