Weekly Job Notification: ಈ ವಾರ ಅರ್ಜಿ ಸಲ್ಲಿಸಬಹುದಾದ ಸರ್ಕಾರಿ ಉದ್ಯೋಗಗಳಿವು

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಕಾಲ ಕಾಲಕ್ಕೆ ವಿವಿಧ ಹುದ್ದೆಗಳ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು. ಕಳೆದವಾರ ಕೆಪಿಎಸ್​ಸಿ ಮತ್ತು ಯುಪಿಎಸ್​ಸಿಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅದರ ಅನುಸಾರ ಈ ವಾರ ಅರ್ಜಿ ಸಲ್ಲಿಸಬಹುದಾದ ಪ್ರಮುಖ ಹುದ್ದೆಗಳು ಇಲ್ಲಿವೆ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ಮೀನುಗಾರಿಕೆ ಸಹಾಯಕ ನಿರ್ದೇಶಕರ (Assistant Director of Fisheries) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೈದ್ರಾಬಾದ್​​-ಕರ್ನಾಟಕ ವೃಂದದಲ್ಲಿನ ಖಾಲಿ ಇರುವ ಗ್ರೂಪ್​-ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಅಕ್ಟೋಬರ್​ 19 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ : ಮೀನುಗಾರಿಕೆ ಇಲಾಖೆಯಲ್ಲಿ ಉದ್ಯೋಗಾವಕಾಶ; ಗ್ರೂಪ್​ ಬಿ ಹುದ್ದೆಗೆ ಅರ್ಜಿ ಆಹ್ವಾನ

    ಪೊಲೀಸ್​ ಕಾನ್ಸ್​ಟೇಬಲ್ (Police Constable)​ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಮೂಲಕ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಪೊಲೀಸ್ ಇಲಾಖೆಯ (Karnataka State Police) ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಒಟ್ಟು 3484 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 31 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ : ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ

    UPSC Recruitment 2022: ಕೇಂದ್ರ ಲೋಕ ಸೇವಾ ಆಯೋಗದಿಂದ (union Public Service Commission) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಮತ್ತು ಇತರ ಸಚಿವಾಲಯಗಳಲ್ಲಿ ಜಾರಿ ನಿರ್ದೇಶಕ ಅಧಿಕಾರಿ ಸೈಂಟಿಸ್ಟ್​ ಬಿ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 54 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 29 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ: ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಳಗಾವಿಯ ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ (Karnataka Lingayat Education Society) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯ ಅನುದಾನಿತ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆ ಸೇರಿ ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಷಯಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ ಕರ್ನಾಟಕ ಲಿಂಗಾಯತ ಶಿಕ್ಷಣ ಸೊಸೈಟಿಯಲ್ಲಿ ಫ್ರೌಢ ಶಾಲಾ ಶಿಕ್ಷಕರ ನೇಮಕಾತಿ

    ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್​ನಲ್ಲಿ ( Karnataka Central Co-operative Bank Limited Dharwad) ಕ್ಲರ್ಕ್​ (Clerk) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿ ಮೂಲಕ ಒಟ್ಟು 87 ಕ್ಲರ್ಕ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ

    ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಿಂದ (State Bank Of India) 5008 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್​ ಸಪೋರ್ಟ್​ ಅಂಡ್​ ಸೇಲ್ಸ್​​)ನಲ್ಲಿ ಈ ಪ್ರಮಾಣದ ನೇಮಕಾತಿಗೆ ಅರ್ಜಿ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಇನ್ನು ಕರ್ನಾಟಕಕ್ಕೆ 316 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಮೂಲಕ ಬ್ಯಾಂಕಿಂಗ್​ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27 ಆಗಿದೆ.

    ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸವಿವರ ಪಡೆಯಲಿ ಇಲ್ಲಿ ಕ್ಲಿಕ್​ ಮಾಡಿ: ಎಸ್​ಬಿಐನಲ್ಲಿ 5008 ಜೆಎ ನೇಮಕಕ್ಕೆ ಅರ್ಜಿ ಆಹ್ವಾನ; ಕರ್ನಾಟಕಕ್ಕೆ 316 ಹುದ್ದೆ
    Published by:Seema R
    First published: