ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ (WR) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 3612 ಹುದ್ದೆಗಳಿಗೆ ಅರ್ಜಿ ಆಹ್ವಾಸಿಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 27 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆ: ಪಶ್ಚಿಮ ರೈಲ್ವೆ ಉದ್ಯೋಗ
ಹುದ್ದೆ: ಅಪ್ರೆಂಟಿಸ್
ಒಟ್ಟು ಹುದ್ದೆ ಸಂಖ್ಯೆ: 3612
ವೇತನ: ರೈಲ್ವೆ ಇಲಾಖೆ ನಿಯಮ ಅನುಸಾರ ಒಂದು ವರ್ಷ ಸ್ಟೈಫಂಡ್
ಕಾರ್ಯ ನಿರ್ವಹಿಸುವ ಸ್ಥಳ: ಮುಂಬೈ
ಹುದ್ದೆಗಳು |
ಹುದ್ದೆ ಸಂಖ್ಯೆ |
ಫಿಟ್ಟರ್ |
941 |
ವೆಲ್ಡರ್ |
378 |
ಕಾರ್ಪೆಂಟರ್ |
221 |
ಪೇಂಟರ್ |
213 |
ಡೀಸೆಲ್ ಮೆಕ್ಯಾನಿಕ್ |
209 |
ಮೆಕ್ಯಾನಿಕ್ ಮೋಟಾರ್ ವೆಹಿಕಲ್ |
15 |
ಎಲೆಕ್ಟ್ರಿಷಿಯನ್ |
639 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ |
112 |
ವೈರ್ಮ್ಯಾನ್ |
14 |
ರೆಫ್ರಿಜರೇಟರ್ (AC - ಮೆಕ್ಯಾನಿಕ್) |
147 |
ಪೈಪ್ ಫಿಟ್ಟರ್ |
186 |
ಪ್ಲಂಬರ್ |
126 |
ಡ್ರಾಫ್ಟ್ಮನ್ (ಸಿವಿಲ್) |
88 |
ಪಾಸ್ಸಾ |
252 |
ಸ್ಟೆನೋಗ್ರಾಫರ್ |
8 |
ಮೆಕಾನಿಸ್ಟ್ |
26 |
ಟರ್ನರ್ |
37 |
ಶೈಕ್ಷಣಿಕ ಅರ್ಹತೆ: ಅಧಿಸೂಚನೆ ನಿಯಮ ಅನುಸಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ ಮತ್ತು ಪಿಯುಸಿ ಅನ್ನು ಕನಿಷ್ಠ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ತಾಂತ್ರಿಕ ಅರ್ಹತೆಗೆ: ITI ಪ್ರಮಾಣಪತ್ರವು ಕಡ್ಡಾಯವಾಗಿದೆ.
ವಯಸ್ಸಿನ ಮಿತಿ:
ಅಭ್ಯರ್ಥಿಯು ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ
ರೈಲ್ವೆ ನೇಮಕಾತಿ ನಿಯಮ ಅನುಸಾರ
ಆಯ್ಕೆ ವಿಧಾನ
ಮೆರಿಟ್ ಆಧಾರದ ಮೇಲೆ
ಅರ್ಜಿ ಸಲ್ಲಿಕೆ
ಆನ್ಲೈನ್
ಇದನ್ನು ಓದಿ: ಯಂಗ್ ಪ್ರೊಫೆಷನಲ್-1 ಹುದ್ದೆಗೆ ವಾಕ್ ಇನ್ ಇಂಟರ್ವ್ಯೂ
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಇತರೆ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಮೇ 28, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: ಜೂನ್ 27 ಆಗಿದೆ
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
https://www.rrc-wr.com/#
ಇದನ್ನು ಓದಿ: ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳಿಗೆ ನೇಮಕಾತಿ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
-ಮೇಲಿನ ಲಿಂಕ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ