NHAI Recruitment: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಯುವ ವೃತ್ತಿಪರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಹುದ್ದೆ ಅವಧಿ ಎರಡು ವರ್ಷ ಆಗಿದ್ದು, ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಒಂದು ವರ್ಷ ಸೇವಾ ವಿಸ್ತರಣೆ ನಡೆಸಲಾಗುವುದು

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ(National Highways Authority of India)  ಯುವ ವೃತ್ತಿಪರ (Young Professional) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿಗೆ ನೇಮಕಾತಿಗೆ ಪ್ರಾಧಿಕಾರ ಮುಂದಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಯನ್ನ್ನ ಆನ್​ಲೈನ್​ ಮೂಲಕ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಹುದ್ದೆ ಅವಧಿ ಎರಡು ವರ್ಷ ಆಗಿದ್ದು, ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಒಂದು ವರ್ಷ ಸೇವಾ ವಿಸ್ತರಣೆ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿಸ್ತರಣೆ
    ಸಂಸ್ಥೆಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
    ಹುದ್ದೆಯ ಹೆಸರುಯುವ ವೃತ್ತಿಪರ
    ಹುದ್ದೆಗಳ ಸಂಖ್ಯೆ30
    ಕಾರ್ಯ ನಿರ್ವಹಣೆ ಸ್ಥಳಭಾರತಾದ್ಯಂತ
    ವೇತನ60000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಎಲ್​ಎಲ್​ಪಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಕೋಲಾರ ಜಿಲ್ಲಾ ಪಂಚಾಯತ್​ನಲ್ಲಿದೆ 46 ಹುದ್ದೆ; ಲಿಖಿತ ಪರೀಕ್ಷೆ ಇಲ್ಲ, ನೇರ ನೇಮಕಾತಿ

    ವಯಸ್ಸಿನ ಮಿತಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು ಮೀರಿರಬಾರದು.

    ವಯಸ್ಸಿನ ಸಡಿಲಿಕೆ:
    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    CLAT 2022 ಸ್ಕೋರ್ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಸೆಪ್ಟೆಂಬರ್​​ 2022

    ಇದನ್ನು ಓದಿ: 481 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಡಿಗ್ರಿ, ಡಿಪ್ಲೊಮಾ ಆದವರಿಗೆ ಅವಕಾಶ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: nhai.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
    Published by:Seema R
    First published: