Young Professional Job: ವಾಣಿಜ್ಯ ಸಚಿವಾಲಯದಲ್ಲಿ 65 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಕೇಂದ್ರ ವಾಣಿಜ್ಯ ಸಚಿವಾಲಯದಿಂದ ಆಹ್ವಾನಿಸಲಾದ ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ವಾಣಿಜ್ಯ ಸಚಿವಾಲಯದಲ್ಲಿ ಹುದ್ದೆ

ವಾಣಿಜ್ಯ ಸಚಿವಾಲಯದಲ್ಲಿ ಹುದ್ದೆ

  • Share this:
    ಕೇಂದ್ರ ವಾಣಿಜ್ಯ ಸಚಿವಾಲಯದಲ್ಲಿ(Ministry of Commerce) 65 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಯಂಗ್ ಪ್ರೊಫೆಷನಲ್ (young Professional), ಅಸೋಸಿಯೇಟ್ (Associate) ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಮೂಲಕ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 13 ಆಗಿದೆ.

    ಕೇಂದ್ರ ವಾಣಿಜ್ಯ ಸಚಿವಾಲಯದಿಂದ ಆಹ್ವಾನಿಸಲಾದ ಈ ಹುದ್ದೆಗಳು ಗುತ್ತಿಗೆ ಆಧಾರಿತವಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

    ಸಂಸ್ಥೆಯ ಹೆಸರು: ವಾಣಿಜ್ಯ ಸಚಿವಾಲಯ (ವಾಣಿಜ್ಯ ಸಚಿವಾಲಯ)
    ಹುದ್ದೆಯ ಹೆಸರು: ಯಂಗ್ ಪ್ರೊಫೆಷನಲ್, ಅಸೋಸಿಯೇಟ್
    ಹುದ್ದೆಗಳ ಸಂಖ್ಯೆ: 65
    ಉದ್ಯೋಗ ಸ್ಥಳ: ಅಖಿಲ ಭಾರತ
    ಸಂಬಳ: 60000-330000 ರೂ ಪ್ರತಿ ತಿಂಗಳು

































    ಹುದ್ದೆಹುದ್ದೆ ಸಂಖ್ಯೆವಯೋಮಿತಿವೇತನ
    ಯುವ ವೃತ್ತಿಪರ22ಗರಿಷ್ಠ 35 ವರ್ಷ60ಸಾವಿರ ರೂ ಮಾಸಿಕ
    ಅಸೋಸಿಯೇಟ್19ಗರಿಷ್ಠ 45 ವರ್ಷ80000-145000 ರೂ ಮಾಸಿಕ
    ಸಲಹೆಗಾರ15ಗರಿಷ್ಠ 50 ವರ್ಷ145000-265000 ರೂ ಮಾಸಿಕ
    ಸೀನಿಯರ್ ಕನ್ಸಲ್ಟೆಂಟ್9ಗರಿಷ್ಠ 65 ವರ್ಷ265000-330000 ರೂ ಮಾಸಿಕ

    ವಿದ್ಯಾರ್ಹತೆ
    ವಾಣಿಜ್ಯ ಸಚಿವಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಟೆಕ್​​, ಎಲ್​ಎಲ್​ಎಂ ಸ್ನಾತಕೋತ್ತರ ಪದವಿ, ಜೊತೆಗೆ ಎಂಬಿಎ ಪೂರ್ಣಗೊಳಿಸಿರಬೇಕು

    ವಯಸ್ಸಿನ ಸಡಿಲಿಕೆ:
    ವಾಣಿಜ್ಯ ಸಚಿವಾಲಯದ ನಿಯಮಗಳ ಪ್ರಕಾರ

    ಇದನ್ನು ಓದಿ: ಮೈಸೂರು ವಿವಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ: ಇಮೇಲ್​ ಮುಖಾಂತರ

    ಇಮೇಲ್​​​ ವಿಳಾಸ:  moc_est2@nic.in

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 22 ಜೂನ್ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 13 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: commerce.gov.in

    ಇದನ್ನು ಓದಿ: ಬಿಎಂಟಿಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    -ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಮೇಲಿನ ಇಮೇಲ್​​ ​ ವಿಳಾಸಕ್ಕೆ ಕಳುಹಿಸಬೇಕು.
    Published by:Seema R
    First published: