NCS Recruitment: ಪದವಿ ಆಗಿದ್ರೆ ಯಂಗ್ ಪ್ರೊಫೆಷನಲ್ ಹುದ್ದೆಗೆ ಅರ್ಜಿ ಸಲ್ಲಿಸಿ

ಒಪ್ಪಂದದ ಆಧಾರದ ಮೇಲೆ ಪದವೀಧರರ ಅಭ್ಯರ್ಥಿಗಳಿಂದ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

 • Share this:
  ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು (Ministry of Labour and Employment) ರಾಷ್ಟ್ರೀಯ ವೃತ್ತಿ ಸೇವೆ (National Career Service- NCS) ಯೋಜನೆ ಅಡಿ 130 ಯಂಗ್​ ಪ್ರೊಫೇಶನಲ್​​ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜೂನ್​ 22 ಆಗಿದೆ.

  ಒಪ್ಪಂದದ ಆಧಾರದ ಮೇಲೆ ದೇಶದ ಪದವೀಧರರ ಅಭ್ಯರ್ಥಿಗಳಿಂದ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಕೆಳಕಂಡಂತೆ ಇದೆ.  ಹುದ್ದೆ ಮಾಹಿತಿಹುದ್ದೆ ವಿವರ
  ಸಂಸ್ಥೆಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
  ಹುದ್ದೆಯಂಗ್​ ಪ್ರೊಫೇಶನಲ್​
  ಒಟ್ಟು ಹುದ್ದೆ130
  ವಿದ್ಯಾರ್ಹತೆಯಾವುದೇ ವಿಷಯದಲ್ಲಿ ಪದವಿ
  ಕಾರ್ಯ ನಿರ್ವಹಣೆ ಸ್ಥಳದೇಶಾದ್ಯಂತ
  ವೇತನ50 ಸಾವಿರ ರೂ ಮಾಸಿಕ

  ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  ಪ್ರಮುಖ ಕೌಶಲ್ಯಗಳು:
  ಅನಾಲಿಟಿಕ್​, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಜ್ಞಾನ

  ಅನುಭವ
  ಸಂಬಂಧ ಪಟ್ಟ ಕ್ಷೇತ್ರದಲ್ಲಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅನುಭವ ಹೊಂದಿರಬೇಕು.

  ವಯೋಮಿತಿ: ಅಧಿಸೂಚನೆ ಅನ್ವಯ ಅಭ್ಯರ್ಥಿಯೂ 24 ವರ್ಷದಿಂದ 40 ವರ್ಷ ವಯೋಮಿತಿ ಒಳಗೆ ಇರಬೇಕು (8/6/1982 ಮತ್ತು 8/6/ 1998ರೊಳಗೆ ಜನಿಸಿರಬೇಕು)

  ಇದನ್ನು ಓದಿ: ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಪ್ರಾಧ್ಯಾಪಕ ಹುದ್ದೆಗೆ ವಾಕ್​-ಇನ್​- ಇಂಟರ್​ವ್ಯೂ

  ವಯೋಮಿತಿ ಸಡಿಲಿಕೆ
  ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
  ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ
  ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ

  ಅರ್ಜಿ ಸಲ್ಲಿಕೆ: ಆನ್​ಲೈನ್​

  ಪ್ರಮುಖ ದಿನಾಂಕ
  ಆನ್​ಲೈನ್​ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜೂನ್ 8, 2022
  ಆನ್​ಲೈನ್​ ಅರ್ಜಿ ಸ್ಲಿಸಲು ಕೊನೆಯ ದಿನಾಂಕ: ಜೂನ್​ 22, 2022

  ಅಧಿಸೂಚನೆ ಪ್ರಮುಖ ಲಿಂಕ್​​​ಗಳು
  ಅಧಿಕೃತ ಅಧಿಸೂಚನೆಗೆ ಇಲ್ಲಿ ಕ್ಲಿಕ್​ ಮಾಡಿ
  ಅಧಿಕೃತ ವೆಬ್​ಸೈಟ್​: https://www.ncs.gov.in/

  ಇದನ್ನು ಓದಿ: ನೌಕಪಡೆಯಲ್ಲಿ 338 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೆ ಅವಕಾಶ

  ಅರ್ಜಿ ಸಲ್ಲಿಕೆ ವಿಧಾನ

  -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
  Published by:Seema R
  First published: