ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು (Khadi and Village Industries Commission) ಯುವ ವೃತ್ತಿಪರರ (young Professionals)ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 10 ಯುವ ವೃತ್ತಿಪರ ಭರ್ತಿಗೆ ಆಯೋಗ ಅಧಿಸೂಚನೆ ಹೊರಡಿಸಿದೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಮಕ ಜುಲೈ 30 ಆಗಿದೆ.
ಈ ಹುದ್ದೆಗಳನ್ನು ಆಯೋಗ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಒಂದು ವರ್ಷದ ಒಪ್ಪಂದದ ಹುದ್ದೆ ಇದಾಗಿದೆ. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ಆಯ್ಕೆ ಪ್ರಕ್ರಿಯೆ, ನೇಮಕಾತಿ, ಅರ್ಜಿ ಭರ್ತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ಮಾಹಿತಿ | ಹುದ್ದೆ ವಿವರ |
ಸಂಸ್ಥೆ | ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) |
ಹುದ್ದೆ | ಯುವ ವೃತ್ತಿಪರರು |
ಹುದ್ದೆಗಳ ಸಂಖ್ಯೆ | 10 |
ಕಾರ್ಯ ನಿರ್ವಹಣೆ ಸ್ಥಳ | ಕೇರಳ - ತಮಿಳುನಾಡು - ಕರ್ನಾಟಕ - ತೆಲಂಗಾಣ |
ವೇತನ | 25000-30000 ರೂ ಪ್ರತಿ ತಿಂಗಳು |
ಇದನ್ನು ಓದಿ: ಎಸ್ಎಸ್ಎಲ್ಸಿ ಆಗಿದ್ರೆ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿದೆ ಹುದ್ದೆ; ತಿಂಗಳಿಗೆ 35 ಸಾವಿರ ರೂ ವೇತನ
ವಯಸ್ಸಿನ ಮಿತಿ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು27 ವರ್ಷಗಳಿಗಿಂತ ಕಡಿಮೆಯಿರಬೇಕು.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ದಾಖಲೆಗಳ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ
ಪ್ರಮುಖ ಕೌಶಲ್ಯ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲ್ಯವನ್ನು ಕೂಡ ಹೊಂದಿರಬೇಕು.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಜುಲೈ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: kvic.gov.in
ಇದನ್ನು ಓದಿ: ಯಾವುದೇ ವಿಷಯದಲ್ಲಿ ಡಿಗ್ರಿ ಆದವರಿಗೆ ಚಿಕ್ಕಮಗಳೂರಿನಲ್ಲಿದೆ ಕೆಲಸ; ತಿಂಗಳಿಗೆ 35,000 ರೂ ವೇತನ
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
-ಮೇಲಿನ ಲಿಂಕ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ