ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ (Youth Empowerment and Sports Department) ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ, ಶಿವಮೊಗ್ಗದ ಯುವ ಸ್ಪಂದನ ಕೇಂದ್ರದಲ್ಲಿ ಕಾರ್ಯ ನಿರ್ವಹಣೆಗೆ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 10 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆ |
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ |
ಹುದ್ದೆ |
ಯುವ ಪರಿವರ್ತಕರು |
ಒಟ್ಟು ಹುದ್ದೆ |
ನಿರ್ಧಿಷ್ಟ ಪಡಿಸಿಲ್ಲ. |
ಕಾರ್ಯ ನಿರ್ವಹಣೆ ಸ್ಥಳ |
ಶಿವಮೊಗ್ಗೆ ಜಿಲ್ಲೆ |
ವಿದ್ಯಾರ್ಹತೆ: ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಅದಕ್ಕೂ ಮೇಲ್ಪಟ್ಟು ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಿಶೇಷ ಸೂಚನೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಮತ್ತು ಬರೆಯಲು ಬರಬೇಕು.
ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಹಾಗೂ ಹೊಸನಗರ ಮತ್ತು ಸೊರಬ ತಾಲೂಕಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ: ಅಧಿಸೂಚನೆ ಅನ್ವಯ ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದವರಾಗಿದ್ದು, ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನು ಓದಿ: ಈಶಾನ್ಯ ಗಡಿ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 5636 ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ವಿಧಾನ
ಆಫ್ಲೈನ್
ಅರ್ಜಿ ಶುಲ್ಕ
ಮೇಲ್ಕಂಡ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಸಲಿಲ್ಲ.
ಪ್ರಮುಖದ ದಿನಾಂಕ
ವೇತನ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿಯಮ ಅನುಸಾರ
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 10 ಆಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿಗಳ ದಾಖಲೆಗಳನ್ನು ಸಿದ್ದಪಡಿಸಿ.
ಇದನ್ನು ಓದಿ: ಆಕಾಶವಾಣಿಯಲ್ಲಿ ಸುದ್ದಿ ವಾಚಕರು, ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
-ಈ ದಾಖಲೆಗಳನ್ನು ಕೆಳಕಂಡ ವಿಳಾಸಕ್ಕೆ ಅಭ್ಯರ್ಥಿಗಳು ಖುದ್ದಾಗಿ ನೀಡಬೇಕಿದೆ.
ನೆಹರೂ ಕ್ರೀಡಾಂಗಣ, ಯುವ ಸ್ಪಂದನ ಕೇಂದ್ರ, ಶಿವಮೊಗ್ಗ.
-ಇಲ್ಲವಾದಲ್ಲಿ ಅಭ್ಯರ್ಥಿಗಳ ವಿವರವಾದ ಮಾಹಿತಿಗಳನ್ನು ಈ ಮೊಬೈಲ್ನಂಬರಿಗೆ ವಾಟ್ಸಾಪ್ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ:
ಪವಿತ್ರ ಆರ್. ಸಮಾಲೀಚಕಿ - ಮೊ. ಸಂಖ್ಯೆ 9353180519
ನಾಗರತ್ನ, ಕ್ಷೇತ್ರ ಸಂಪರ್ಕಾಧಿಕಾರಿ 8088488688 ಇಲ್ಲ ಈ ನಂಬರಿಗೆ 08182-222248 ಸಂಪರ್ಕಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ