ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ (ಆಂಗ್ಲ ಮಾಧ್ಯಮ) ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (CBSC) ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು (Students) ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ (Free Education) ಪ್ರಯೋಜನವನ್ನು ಪಡೆಯಬಹುದಾಗಿದೆ.
ಶಾಲೆಯ ಹೆಸರು | ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ |
ತರಗತಿ | 6ನೇ ತರಗತಿ |
ಯಾರೆಲ್ಲ ಅರ್ಜಿ ಸಲ್ಲಿಸಬಹುದು? | ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು |
ಸಹಾಯವಾಣಿ | 827779990 ಅಥವಾ 08472-247260 |
ಇದನ್ನೂ ಓದಿ: Kalaburagi News: ಅಂಬೇಡ್ಕರ್ ಹಬ್ಬ ಆಚರಣೆಗೆ ತವರಿಗೆ ವಾಪಸ್ ಆದ ಹೆಣ್ಮಕ್ಕಳು!
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತಿಯುಳ್ಳ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪಾಲಕರು ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಥವಾ ಉಚಿತ ಸೇವೆ ಪಡೆಯಲು ತಮ್ಮ ಸಮೀಪದ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರವನ್ನು ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ / ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ ?’
ಈಗಾಗಲೇ ಏಪ್ರಿಲ್ 27 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಮೇ 13 ರಂದು ಕೊನೆಯ ದಿನವಾಗಿದೆ.
ಇದನ್ನು ಓದಿ: Kalaburagi Success Story: ಸಾವಯವ ಬೆಲ್ಲದಿಂದ ಲಕ್ಷಾಧಿಪತಿಗಳಾದ ಅಣ್ಣ ತಮ್ಮಂದಿರು!
ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅಥವಾ ಸಹಾಯವಾಣಿ 827779990, ಕಲಬುರಗಿಯ ಜಿ.ಡಿ.ಎ. ಕಚೇರಿಯ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ